ಮಂಡ್ಯ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ : ಪ್ರತಿಭಟನೆಗೆ ನಿರ್ಮಲಾನಂದ ಸ್ವಾಮೀಜಿ ಸಾಥ್

ಮಂಡ್ಯ: ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸ್ವಾಮೀಜಿಗಳು, ನಟರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೂ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನಲೆ ಗುರುವಾರದಿಂದಲೂ ಪ್ರತಿಭಟನೆ ನಡೆಯುತ್ತಿದೆ. ಇಂದು ಪ್ರತಿಭಟನೆ ತೀವ್ರತೆ ಹೆಚ್ಚಾಗಿದ್ದು, ಸೆಸ್ಟೆಂಬರ್ 23 ರಂದು ಮಂಡ್ಯ ಬಂದ್‌ಗೂ ಕರೆ ನಿಡಲಾಗಿದೆ.

ಬೆಂಗಳೂರು ಜಲಮಂಡಳಿಗೆ ಮುತ್ತಿಗೆ : ಕನ್ನಡ ಸಂಘಟನೆಗಳ ಪ್ರತಿಭಟನಾಕಾರರು ಇಂದು ಬೆಂಗಳೂರು ಜಲಮಂಡಳಿಗೆ ಕನ್ನಡಪರ ಸಂಘಟನೆ ಮುತ್ತಿಗೆ ಹಾಕಿದರು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಕೇಂದ್ರಕ್ಕೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಬೆಂಗಳೂರಿಗೆ ನೀರು ಸರಬರಾಜು ಆಗುವ ಕೇಂದ್ರದ ಬಳಿ ಜಮಾಯಿಸಿದ ಕಾವೇರಿ ಹೋರಾಟ ಸಮಿತಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ವೇಳೆ ಬೆಂಗಳೂರಿಗರ ಮೇಲೂ ಆಕ್ರೋಶ ಹೊರಹಾಕಿದ ಹೋರಾಟಗಾರರು ಬೆಂಗಳೂರಿನ ಜನರು ಕಾವೇರಿ ನೀರಿನ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಕುಡಿಯಲು ನೀರು ಕೊಡದಿದ್ದರೆ ಅವರು ಬೀದಿಗೆ ಬಂದು ಹೋರಾಟ ಮಾಡ್ತಾರೆ. ಕಾವೇರಿ ನೀರಿನ ಅವಶ್ಯಕತೆ ಎಲ್ಲರಿಗೂ ಇದೆ ಎಲ್ಲರು ಹೋರಾಟಕ್ಕೆ ಬಂದು ರೈತರಿಗೆ ಬೆಂಬಲ ನೀಡಬೇಕು. ತಮಿಳುನಾಡಿಗೆ ಹೊಗುತ್ತಿರುವ ನೀರನ್ನ ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು. ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಕಾವೇರಿ ಹೋರಾಟಕ್ಕೆ ಚುಂಚಶ್ರೀ ನಿರ್ಮಲಾನಂದನಾಥ ಸ್ವಾಮೀಜಿ : ಇಂದಿನ ಕಾವೇರಿ ಹೋರಾಟದ ಭಾಗವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಭಾಗಿಯಾಗಲು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಹಾಗೂ ವಿವಿಧ ಶಾಖೆಗಳ ಶಾಖಾ ಮಠಾಧೀಶರು ಆಗಮಿಸಿ, ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಗೆ ಸಾಥ್ ನೀಡಿದ್ದಾರೆ.

ಹೋರಾಟಗಾರರನ್ನ ವಶಕ್ಕೆ ಪಡೆದ ಪೊಲೀಸರು‌ : ಮಳವಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಕೆಲ ಹೊತ್ತಿನ ಬಳಿಕ ಪೊಲೀಸರು ವಶಕ್ಕೆ ಪಡೆದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago