ಮಂಡ್ಯ

ತಮಿಳುನಾಡಿನ ದಾಹ ತಣಿಸಿದ ಕಾವೇರಿ ಮಾತೆ..!

ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ  ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್‌ ಎಸ್‌ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ.

ಕೆಆರ್‌ ಎಸ್‌ ಜಲಾಶಯ ಭರ್ತಿಗೆ ಇನ್ನು ಕೇವಲ ೨ ಅಡಿಯಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ ನದಿ ಮೂಲಕ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯೂಸೆಕ್‌ಗೆ ಏರಿಸಲಾಗಿದೆ. ಇದರಿಂದ  ನದಿ ಮೂಲಕ ತಮಿಳುನಾಡಿಗೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಅಲ್ಲದೆ ಜಲಾಶಯಕ್ಕೆ ಇನ್ನೂ ಎರಡು  ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಬರುವ ನಿರೀಕ್ಷೆಯಿದ್ದು, ಹೊರಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಲಿದೆ.

ಮೊನ್ನೆಯಷ್ಟೇ ತಮಿಳುನಾಡು ನಮಗೆ ಕಾವೇರಿ ನೀರು ಹರಿಸುತ್ತಿಲ್ಲ ಎಂದು ಕಾವೇರಿ ಪ್ರಾಧಿಕಾರದ ಮುಂದೆ ವಾದ ಮಂಡಿಸಿತ್ತು. ಈ ಹಿನ್ನೆಲೆ ಪ್ರಾಧಿಕಾರವು ಜುಲೈ ಅಂತ್ಯದವರೆಗೆ ಪ್ರತಿದಿನ ೧ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು.ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ನಡೆಸಿ ಅಷ್ಟೋಂದು ನೀರು ಬಿಡಲು ಆಗಲ್ಲ. ದಿನಕ್ಕೆ ೧೮೦೦ ಕ್ಯೂಸೆಕ್‌ ಮಾತ್ರ ಬಿಡುತ್ತೇವೆ ಎಂದು ತೀರ್ಮಾನ ಕೈಗೊಂಡಿದ್ದರು. ಆದರೆ ಈಗ ಎಲ್ಲೆಡೆ ಉತ್ತಮವಾದ ಮಳೆಯಾಗಿರುವ ಕಾರಣ ಕಾವೇರಿ ಒಡಲು ಬಹುತೇಕ ಭರ್ತಿಯಾಗಿದೆ. ಹೀಗಾಗಿ ತಮಿಳುನಾಡು ಕೇಳಿದ್ದಿಕಿಂತ ಹೆಚ್ಚಿನ ನೀರೇ ಹರಿದು ಹೋಗುತ್ತಿದೆ. ಈ ಮೂಲಕವಾಗಿ ತಮಿಳುನಾಡಿನ ನೀರಿನ ದಾಹವನ್ನು ಕಾವೇರಿ ಮಾತೆ ನೀಗಿಸಿದ್ದಾಳೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago