ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು ಕೊಂಡು ಕಾವೇರಿ ನದಿ ನೀರಿನ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿದರು.
ನಗರದ ಸರ್ ಎಂವಿ ಪ್ರತಿಮೆ ಎದುರು ರೈತರು,ಕನ್ನಡ ಹೋರಾಟಗಾರರು ಸೇರಿ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಂಕಷ್ಟ ಕಾಲದಲ್ಲಿ ಮಧ್ಯ ಪ್ರವೇಶ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಂಸದೆ ಸುಮಲತಾ ಅಂಬರೀಶ್ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಆಕ್ರೋಶಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ಕಾವೇರಿ ಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ತಮಿಳುನಾಡಿಗೆ 13 ಟಿಎಂಸಿ ನೀರು ಹರಿದುಹೋಗಿದೆ, ಇದೀಗ 7 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಜಲಾಶಯದಲ್ಲಿ ನೀರಿನ ಪ್ರಮಾಣ ದಿನೇ ದಿನೇ ಕುಸಿತ ಕಾಣುತ್ತಿದ್ದು ಇದೇ ಪರಿಸ್ಥಿತಿ ಮುಂದುವರೆದರೆ ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನೀರು ಬಿಡುವುದಿರಲಿ. ಕುಡಿಯುವ ನೀರು ಇಲ್ಲದಂತಾಗುತ್ತದೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಕನ್ನಡಿಗರ ಬಗ್ಗೆಗಿನ ಆಲಸ್ಯ ಮತ್ತು ತಮಿಳುನಾಡು ಒಲೈಕೆಯ ಧೋರಣೆಯಿಂದ ಕರ್ನಾಟಕ ರಾಜ್ಯದ ರೈತರ ಬಲಿಪಶು ಆಗುತ್ತಿದ್ದಾರೆ ಎಂದು ಆರೋಪಿಸಿದರು.
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕೆ ಟಿ ಶ್ರೀಕಂಠೇಗೌಡ, ಸುನಂದಾ ಜಯರಾಮ್, ಬೇಕ್ರಿ ರಮೇಶ್, ಕೆ ಬೋರಯ್ಯ, ಕೀಲಾರ ಕೃಷ್ಣ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಎಂ ಎಲ್ ತುಳಸೀದರ್. ಇಂಡುವಾಳು ಬಸವರಾಜ್, ಕರವೇ ಶಂಕರೇಗೌಡ ನೇತೃತ್ವ ವಹಿಸಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…