ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ.
ನಗರದ ಸರ್ ಎಂ ವಿ ಪ್ರತಿಮೆ ಎದುರು ಸಮಿತಿಯ ಆಶ್ರಯದಲ್ಲಿ ಮಾಜಿ ಶಾಸಕರು, ರೈತರು,ಕನ್ನಡ ಪರ ಹೋರಾಟಗಾರರು. ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪ್ರತಿಭಟನಾ ಧರಣಿ ನಡೆಸಿದರು.
ಕಾವೇರಿ ನಮ್ಮದು, ರಕ್ತ ಕೊಟ್ಟರೂ ನೀರು ಬಿಡೆವು ಎಂಬ ಘೋಷವಾಕ್ಯ ದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದರು.
ತಮಿಳುನಾಡಿಗೆ ಸತತವಾಗಿ ನೀರು ಹರಿಸಿದ ಪರಿಣಾಮ 113 ಅಡಿ ಇದ್ದ ನೀರು 101 ಅಡಿಗೆ ಕುಸಿದಿದೆ. ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಇಲ್ಲದಂತಾಗಿದೆ, ಪ್ರಾಧಿಕಾರದ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಫಸಲು ರಕ್ಷಣೆ ಇರಲಿ ಕುಡಿಯುವ ನೀರು ಕೂಡ ನೀರು ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದರಿಂದ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಎಂಟು ನಗರಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ, ತಕ್ಷಣ ಕಾವೇರಿ ನದಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಸರ್ಕಾರ ತಾಳ್ಮೆ ವಹಿಸಿ ತಮಿಳುನಾಡಿಗೆ ನೀರು ಬಿಡದೆ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗ ಬೇಕಿತ್ತು, ನೀರು ಬಿಟ್ಟ ಪರಿಣಾಮ ಮತ್ತು ಈಗಲೂ ನೀರು ಹರಿಸುತ್ತಿರುವ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುತ್ತಿದೆ ಎಂದು ತಿಳಿಸಿದರು.
ಕಾವೇರಿ ನದಿ ನೀರು ವಿಚಾರದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಾ ಬಂದಿದೆ, ಸಂಕಷ್ಟ ಬಂದಾಗ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರ ಪಾಲಿಸಲು ಸೂಚನೆ ನೀಡುವುದಿಲ್ಲ,ಬದಲಾಗಿ ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಉಂಟುಮಾಡುತ್ತಿದೆ ಎಂದು ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಅಡ್ಡಿಪಡಿಸುವ ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ನದಿ ಜೋಡಣೆ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡುತ್ತಿದೆ, ಕಾವೇರಿ ನದಿ ನೀರಿನ ಬಹು ಪಾಲನ್ನು ಪಡೆಯಲು ಒತ್ತಡ ತಂತ್ರ ಅನುಸರಿಸಿ ಕರ್ನಾಟಕ ವಿರೋಧಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನದಿ ಪಾತ್ರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ಮತ್ತು ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ನೀರಾವರಿ ತಜ್ಜರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಕೊಡುವ ಮೂಲಕ ವಾಸ್ತವ ಸ್ಥಿತಿ ಅರಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಮಾಜಿ ಸಚಿವ ಎಂ ಎಸ್. ಆತ್ಮಾನಂದ,ಮಾಜಿ ಶಾಸಕ ಜಿ ಬಿ ಶಿವಕುಮಾರ್, ಕೆ ಟಿ ಶ್ರೀಕಂಠೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್, ಗುರುಪ್ರಸಾದ್ ಕೆರಗೋಡು, ಪ್ರಶಾಂತ ಬಾಬು, ಕೆ ಬೋರಯ್ಯ, ಅಂಬುಜಮ್ಮ, ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ಅಂದಾನಿ ಸೋಮನಹಳ್ಳಿ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಸಿ.ಎಂ ದ್ಯಾವಪ್ಪ, ಎಂ.ಬಿ ರಮೇಶ್,ಎಸ್ ಕೆ ಮೊಳ್ಳೆಗೌಡ. ಎಂ ಎಲ್ ತುಳಸೀದರ್. ಇಂಡುವಾಳು ಬಸವರಾಜ್ ನೇತೃತ್ವ ವಹಿಸಿದ್ದರು.
ಈ ಕಾಲನೆಂಬುವ ಪ್ರಾಣಿ ಕೈಗೆ ಸಿಕ್ಕಿದ್ದರೆ ಚೆನ್ನಾಗಿ ಥಳಿಸಬೇಕೆಂದಿದ್ದೆ. ಎಲ್ಲೋ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ. ಆಕಾಶದಲಿ ಮಿಂಚಿ ಭೂಕಂಪದಲಿ ಗದ…
ಸಾಕಾರ...?! ಪ್ರತಿ ನುಡಿಜಾತ್ರೆಯಲ್ಲೂ ಒಕ್ಕೊರಲಿನಿಂದ ಆಗುತ್ತವೆ ನಿರ್ಣಯಗಳು ಅಂಗೀಕಾರ... ಕಾದು ನೋಡೋಣ ಯಾವಾಗ ಆಗುತ್ತವೆಯೋ ಸಂಪೂರ್ಣ ಸಾಕಾರ...?! -ಮ.ಗು.ಬಸವಣ್ಣ, ಜೆಎಸ್‌ಎಸ್…
ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು ೨.೭೬ ಲಕ್ಷ ಹುದ್ದೆಗಳು ಖಾಲಿ ಉಳಿದಿವೆ ಎಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಯುವಕರಿಗೆ ಆತಂಕ…
ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಫಲಪುಷ್ಪ ಪ್ರದರ್ಶನದಲ್ಲಿ…
ಜಿ.ಪಿ.ಬಸವರಾಜು ಸಾಹಿತ್ಯ, ಸಂಗೀತ, ನಾಟಕ, ಚಿತ್ರಕಲೆ, ಸಿನಿಮ - ಹೀಗೆ ಸೃಜನಶೀಲ ಕಲೆಯ ಯಾವುದೇ ಪ್ರಕಾರದಲ್ಲಾಗಲಿ, ಗಂಭೀರವಾಗಿ ತೊಡಗುವ ಕಲೆ…
ಪಂಜುಗಂಗೊಳ್ಳಿ ನಸೀಮಾ ಖಾಟೂನ್ ಬಿಹಾರದ ಮುಝಾಫರ್‌ಪುರದ ಚತುರ್ಭುಜ ಆಸ್ಥಾನ ಎಂಬ ರೆಡ್‌ಲೈಟ್ ಪ್ರದೇಶದಲ್ಲಿ ಹುಟ್ಟಿ ಬೆಳೆದ ಒಬ್ಬ ವೇಶ್ಯೆಯ ಮಗಳು.…