Mysore
14
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ: ಡಾ.ಕುಮಾರ

ಮಂಡ್ಯ: ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್‌ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ‌ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡು ಜಯಂತಿಗಳ ವೇದಿಕೆ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗುವುದು . ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬೂ ಜಗ ಜೀವನ್ ರಾಮ್‌ ಅವರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರತಿಯೊಬ್ಬರಿಗೂ ಬೇಕಿದ್ದು, ಮಕ್ಕಳಿಗೆ ಮಹಾನೀಯರ ತತ್ವ ಹಾಗೂ ಆದರ್ಶಗಳ ಬಗ್ಗೆ ತಿಳಿಸಿ ಎಂದರು.

ಶಾಲಾ ಮಕ್ಕಳಿಗೆ ರಜೆ ಇರುವ ಹಿನ್ನಲೆಯಲ್ಲಿ ಮಕ್ಕಳಿಗೆ ಬಿ.ಆರ್ ಅಂಬೇಡ್ಕರ್ ಹಾಗೂ ಬಾಬೂ ಜಗ ಜೀವನ್ ರಾಮ್‌ ಅವರ ವಿಚಾರಧಾರೆಯ ಕುರಿತು ಪ್ರಬಂಧವನ್ನು ಪತ್ರ ಮುಖೇನ ಪಡೆದು ಆಯ್ಕೆಯಾದವರಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದರು.

ಏ.5 ರಂದು ನಡೆಯುವ ಬಾಬೂ ಜಗಜೀವನ್ ರಾಂ ಜಯಂತಿ ಹಾಗೂ ಏ.14 ರಂದು ನಡೆಯುವ ಡಾ: ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹಾಜರಾತಿ ಕಡ್ಡಾಯ ಎಂದರು.

ಪುತ್ಥಳಿ ನಿರ್ಮಾಣಕ್ಕೆ ಪ್ರಸ್ತಾವನೆ

ಡಾ ಬಿ.ಆರ್ ಅಂಬೇಡ್ಕರ್ ಅವರ ಪುತ್ತಳಿಯನ್ನು ಮಂಟಪದೊಂದಿಗೆ ನಿರ್ಮಾಣ ಮಾಡಲು ವಾಸ್ತುಶಿಲ್ಪ ತಜ್ಞರೊಂದಿಗೆ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡಿರುವ ಎಲ್ಲಾ ತಾಲ್ಲೂಕುಗಳನ್ನು ಒಳಗೊಂಡಂತೆ 10 ಜನರನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು, ಮೂಲಭೂತ ಕರ್ತವ್ಯಗಳು, ಸಂವಿಧಾನ ಪೀಠಿಕೆಗಳ ವಿಷಯಗಳ ಸ್ಪರ್ಧೆ ಆಯೋಜಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!