ಮಂಡ್ಯ: ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡು ಜಯಂತಿಗಳ ವೇದಿಕೆ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗುವುದು . ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬೂ ಜಗ ಜೀವನ್ ರಾಮ್ ಅವರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರತಿಯೊಬ್ಬರಿಗೂ ಬೇಕಿದ್ದು, ಮಕ್ಕಳಿಗೆ ಮಹಾನೀಯರ ತತ್ವ ಹಾಗೂ ಆದರ್ಶಗಳ ಬಗ್ಗೆ ತಿಳಿಸಿ ಎಂದರು.
ಶಾಲಾ ಮಕ್ಕಳಿಗೆ ರಜೆ ಇರುವ ಹಿನ್ನಲೆಯಲ್ಲಿ ಮಕ್ಕಳಿಗೆ ಬಿ.ಆರ್ ಅಂಬೇಡ್ಕರ್ ಹಾಗೂ ಬಾಬೂ ಜಗ ಜೀವನ್ ರಾಮ್ ಅವರ ವಿಚಾರಧಾರೆಯ ಕುರಿತು ಪ್ರಬಂಧವನ್ನು ಪತ್ರ ಮುಖೇನ ಪಡೆದು ಆಯ್ಕೆಯಾದವರಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದರು.
ಏ.5 ರಂದು ನಡೆಯುವ ಬಾಬೂ ಜಗಜೀವನ್ ರಾಂ ಜಯಂತಿ ಹಾಗೂ ಏ.14 ರಂದು ನಡೆಯುವ ಡಾ: ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹಾಜರಾತಿ ಕಡ್ಡಾಯ ಎಂದರು.
ಪುತ್ಥಳಿ ನಿರ್ಮಾಣಕ್ಕೆ ಪ್ರಸ್ತಾವನೆ
ಡಾ ಬಿ.ಆರ್ ಅಂಬೇಡ್ಕರ್ ಅವರ ಪುತ್ತಳಿಯನ್ನು ಮಂಟಪದೊಂದಿಗೆ ನಿರ್ಮಾಣ ಮಾಡಲು ವಾಸ್ತುಶಿಲ್ಪ ತಜ್ಞರೊಂದಿಗೆ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಸಾಧಕರಿಗೆ ಸನ್ಮಾನ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡಿರುವ ಎಲ್ಲಾ ತಾಲ್ಲೂಕುಗಳನ್ನು ಒಳಗೊಂಡಂತೆ 10 ಜನರನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು, ಮೂಲಭೂತ ಕರ್ತವ್ಯಗಳು, ಸಂವಿಧಾನ ಪೀಠಿಕೆಗಳ ವಿಷಯಗಳ ಸ್ಪರ್ಧೆ ಆಯೋಜಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…