ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ್ದಾರೆ.
ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಗದ್ದೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಿದ್ದಾರೆ.
ಇಂದು ಬೆಳಿಗ್ಗೆಯೇ ಕಾವೇರಿ ಹಾಗೂ ಕಟ್ಟೇರಿ ಬಳಿ ಇರುವ ಆಂಜನೇಯ ದೇವಾಲಯದಲ್ಲಿ ಕುಮಾರಸ್ವಾಮಿ ಅವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಭತ್ತದ ಪೈರು ಕಣ ಮತ್ತು ಧಾನ್ಯಗಳ ರಾಶಿಗೂ ಕೂಡ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ಕೃಷಿ ನೂರಾರು ಕಾರ್ಮಿಕ ಮಹಿಳೆಯರೊಂದಿಗೆ ಭತ್ತ ನಾಟಿ ಮಾಡಿ ರೈತರಿಗೆ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಅನೇಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಭತ್ತ ನಾಟಿ ಮಾಡಿ ರೈತರ ಬಗ್ಗೆ ಖುಷಿ ಹಂಚಿಕೊಂಡರು.
ಈ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮತ್ತೊಮ್ಮೆ ರೈತರ ಪರ ಇದ್ದಾರೆ ಎಂದು ಸಾಬೀತುಪಡಿಸಿದ್ದು, ರೈತರಿಗಾಗಿ ಹಗಲಿರುಳು ಶ್ರಮ ಪಡುತ್ತಿದ್ದಾರೆ.





