ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಶಾಸಕರು ಬಂದ್ರಾ? ಅಥವಾ ನನ್ನನ್ನು ನೋಡಿಕೊಂಡು ಬಂದರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ನಾನು ಕಾರಣ ಅಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಕೂಡ ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಲುವರಾಯಸ್ವಾಮಿಗೆ ಇರುವ ಚಟಗಳು ನನಗೆ ಇಲ್ಲ. ಮಂಡ್ಯದಲ್ಲಿ ಹೋಗಿ ಕೇಳಿ ಎಲ್ಲರೂ ಅವರ ಚಟಗಳ ಬಗ್ಗೆ ಕೂಲಂಕುಷವಾಗಿ ಹೇಳುತ್ತಾರೆ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.





