Mysore
26
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗ್ಲೇ ಹೇಳಿದ್ದರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಟೀಕೆ ಮಾಡಿದರು.

ಗಾಂಧೀಜಿ ಹೆಸರಿನಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇತ್ತು ರಾಜ್ಯದಲ್ಲಿಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೆಂಡಾಮಂಡಲರಾದ ಎಚ್‌ಡಿಕೆ ಅವರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಯಾವ ಸಚಿವರು ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

Tags:
error: Content is protected !!