ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಟೀಕೆ ಮಾಡಿದರು.
ಗಾಂಧೀಜಿ ಹೆಸರಿನಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇತ್ತು ರಾಜ್ಯದಲ್ಲಿಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡಾಮಂಡಲರಾದ ಎಚ್‌ಡಿಕೆ ಅವರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಯಾವ ಸಚಿವರು ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…