CEO makes surprise visit to GP and TP offices: Warning of disciplinary action against PDOs who fail to distribute e-property documents within 45 days
ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಚೇರಿಗಳಲ್ಲಿ ಸ್ಚಚ್ಛತೆ ಕಪಾಡಬೇಕು. ಸಂಜೆಯೊಳಗೆ ಕಚೇರಿಯ ಒಳಗೆ ಮತ್ತು ಹೊರಗಿನ ವಾತಾವರಣ ಸಂಪೂರ್ಣ ಬದಲಾಗಬೇಕು. ಸಾರ್ವಜನಿಕ ಕೆಲಸಗಳು ಯಾವುದೇ ತೊಂದರೆ ಇಲ್ಲದಂತೆ ಸುಲಲಿತವಾಗಿ ಆಗಬೇಕು. ಈ ಬಗ್ಗೆ ನೀವು ಎಚ್ಚರವಹಿಸಬೇಕು ಎಂದು ತಾಕೀತು ಮಾಡಿದರು.
ಪಿಡಿಓ ಗಳಿಗೆ ನೋಟಿಸ್
ಸಕಾಲದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇ ಮಾಡದೇ ಬೇಜವಾಬ್ದಾರಿ ತೋರಿದ ಮೇಳಾಪುರ, ತಡಗವಾಡಿ, ಹುಲಿಕೆರೆ ಗ್ರಾಮ ಪಂಚಾಯತ್ ಪಿಡಿಓಗಳಿಗೆ ನೋಟಿಸ್ ಜಾರಿ ಮಾಡುವಂತೆ ಇಒ ವೇಣು ಅವರಿಗೆ ಸೂಚನೆ ನೀಡಿದರು. 45 ದಿನಗಳೂಳಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡದಿರುವ pdo ಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲು EO ಗಳಿಗೆ ಸೂಚನೆ ನೀಡಿದರು.
ಕೆ.ಶೆಟ್ಟಿಹಳ್ಳಿ ಗ್ರಾಪಂನಲ್ಲೂ ವಿವಿಧ ಯೋಜನೆಗಳಡಿ ನಿರೀಕ್ಷಿತ ಪ್ರಗತಿ ಆಗದಿರುವುದನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದರು. ಉತ್ತಮ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಗ್ರಾಪಂಗಳಿಗೆ ಭೇಟಿ
ಕೆ.ಶೆಟ್ಟಹಳ್ಳಿ, ಕಿರಂಗೂರು ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿದ ಸಿಇಓ ಅವರು, ಇ-ಸ್ವತ್ತು, ಸಕಾಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪ್ರದರ್ಶಿಸಬೇಕು. ಅಲ್ಲದೆ, ಗ್ರಾಪಂನಲ್ಲಿರುವ ಪಿಡಿಓ ಸೇರಿದಂತೆ ಎಲ್ಲಾ ಸಿಬ್ಬಂದಿಗಳ ಮಾಹಿತಿ, ಕುಡಿಯುವ ನೀರಿನ ಸ್ಥಾವರ, ನಲ್ಲಿಗಳು, ಕಿರು ನೀರು ಸರಬರಾಜು ಘಟಕಗಳು, ಬೋರ್ವೆಲ್ ಸಂಖ್ಯೆಯನ್ನು ಗೋಡೆಯ ಮೇಲೆ ಬರೆಸಬೇಕು. ನೀರು, ನೈರ್ಮಲ್ಯ ಸೇರಿದಂತೆ ಇತರೆ ಯೋಜನೆಗಳ ಕುಂದುಕೊರತೆಗಳ ಕುರಿತು ದೂರು ಸಲ್ಲಿಸಲು ತೆರೆಯಲಾಗಿರುವ ಸಹಾಯವಾಣಿ ಸಂಖ್ಯೆ:8277506000 ಯನ್ನು ಗ್ರಾ.ಪಂ.ನಲ್ಲಿ ಪ್ರದರ್ಶಿಸಬೇಕು. ಅಲ್ಲದೆ, ವಿವಿಧ ಯೋಜನೆಗಳ ಕಡತಗಳನ್ನು ಚೆಕ್ ಲಿಸ್ಟ್ ಪ್ರಕಾರ ನಿರ್ವಹಿಸಬೇಕು ಎಂದರು.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಸ್ವಚ್ಛ ವಾಹಿನಿಗಳು ಸುಸ್ಥಿತಿಯಲ್ಲಿರಬೇಕು, ಪ್ರತಿ ದಿನ ಒಣ ತ್ಯಾಜ್ಯವನ್ನು ಸಂಗ್ರಹಿಸಿ SWM ಶೆಡ್ ಗಳಲ್ಲಿ ಸಂಗ್ರಹಣೆ ಮಾಡಲು ಕ್ರಮವಹಿಸಬೇಕು, ಸಂಗ್ರವಾದ ತ್ಯಾಜ್ಯವನ್ನು MRF ಘಟಕಕ್ಕೆ ಸಾಗಣೆ ಮಾಡಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.
NRLM ಯೋಜನೆಯಡಿ GPLF ಗಳು ಅದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಕಚ್ಚಾ ವಸ್ತು ಖರೀದಿಸಲು, ಉತ್ಪನ್ನಗಳನ್ನು ಸಂಗ್ರಹ ಮಾಡಲು ಹಾಗೂ ಮಾರಾಟ ಮಾಡಲು ಸೂಕ್ತ ವೇದಿಕೆ ಕಲ್ಪಿಸಲು ಗ್ರಾಮ ಪಂಚಾಯತ್ ಗಳು ಅಗತ್ಯ ಕ್ರಮವಹಿಸಬೇಕು. ಹಳೆಯ ಶಾಲಾ ಕಟ್ಟಡಗಳಿದ್ದಲ್ಲಿ, ಅಂತಹ ಕಟ್ಟಡಗಳನ್ನು ತಾತ್ಕಾಲಿಕವಾಗಿ NRLM ಚಟುವಟಿಕೆ ಗಳಿಗೆ ಬಳಸಿಕೊಳ್ಳಲು ಸೂಚನೆ ನೀಡಿದರು.
15ನೇ ಹಣಕಾಸು ಯೋಜನೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಐ.ಪಿ.ಎ.ಎ.ಪಿ. ತಂತ್ರಾಂಶದ ಮೂಲಕ ಕ್ರಿಯಾಯೋಜನೆ ಸಿದ್ದಪಡಿಸುವುದನ್ನು ಕಡ್ಡಾಯ ಮಾಡಲಾಗಿದ್ದು, ಯೋಜನೆಯಡಿ ಭರಿಸಲಾಗುವ ವೆಚ್ಚವನ್ನು ಮೇಲ್ವಿಚಾರಣೆ ಮಾಡಲಾಗುವುದು. ಆದ್ದರಿಂದ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳು ಕ್ರಿಯಾ ಯೋಜನೆಯನ್ನು ಇಂದೀಕರಿಸುವಂತೆ ಸೂಚಿಸಿದರು.
ಜನರನ್ನು ಸತಾಯಿಸಬೇಡಿ: ಕೆಲಸ ಮಾಡಿಕೊಡಿ
‘ವಿವಿಧ ಕೆಲಸಗಳನ್ನು ಮಾಡಿಕೊಡುವಂತೆ ಕೋರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಸತಾಯಿಸದೇ, ಗೌರವಕೊಟ್ಟ ನಿಗದಿತ ಅವಧಿಯೊಳಗೆ ಕೆಲಸ ಮಾಡಿಕೊಡಬೇಕು’ ಎಂದು ಸೂಚನೆ ನೀಡಿದರು.
ಇ-ಸ್ವತ್ತು, ಸಕಾಲ ಸೇರಿದಂತೆ ವಿವಿಧ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇ ಮಾಡುತ್ತಿಲ್ಲ. ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎನ್ನುವ ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವೀಕೃತವಾಗುತ್ತಿದೆ. ಇದು ತಪ್ಪಬೇಕು. ಇದನ್ನು ಸಹಿಸಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಆ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲದಿದ್ದರೆ ಸೂಕ್ತ ಹಿಂಬರಹವನ್ನು ನಿಗದಿತ ಅವಧಿಯೊಳಗೆ ನೀಡಬೇಕು ಎಂದು ಹೇಳಿದರು.
ಗ್ರಾಪಂ ಮತ್ತು ತಾಪಂ ಮಟ್ಟದಲ್ಲೇ ಪರಿಹರಿಸಬಹುದಾದ ಬಹುತೇಕ ಸಮಸ್ಯೆಗಳ ಅರ್ಜಿ ಹಿಡಿದು ಸಾರ್ವಜನಿಕರು ಜಿಲ್ಲಾ ಮಟ್ಟದ ಕಚೇರಿವರೆಗೂ ಬರುತ್ತಿದ್ದಾರೆ. ಇದು ಮುಂದುವರೆದಲ್ಲಿ ಸಂಬಂಧಪಟ್ಟವರಿಂದ ವಿವರಣೆ ಕೇಳಿ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…