Mysore
15
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ ಕೆ.ಆರ್. ನಂದಿನಿ ಅಭಿನಂದಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಅಭಿನಂದಿಸಿ ಪ್ರಶಂಸಾನ ಪತ್ರ ವಿತರಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ ಅವರು, ಕಳಪೆ ಪ್ರಗತಿ ಸಾಧಿಸಿದ ಪ್ರತಿ ತಾಲ್ಲೂಕಿನ ೫ ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಬೇಕೆಂದು ಹೇಳಿದರು.

ಡಿ.೩೧ರೊಳಗೆ ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಪ್ರಾರಂಭಿಸಿ
ಗ್ರಾ.ಪಂ.ನ ಕಡತಗಳು ಹಾಗೂ ಇ-ಸ್ವತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಿಗೂ ಈಗಾಗಲೇ ಸೂಚಿಸಲಾಗಿದ್ದು, ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಧಿ ಅಧಿಕಾರಿಗಳು ಈ ಬಗ್ಗೆ ನಿರಂತರ ಅನುಸರಣೆ ಮಾಡಿ ಎಷ್ಟು ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಸುವ್ಯವಸ್ಥಿತವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ಡಿ.೩೧ರೊಳಗೆ ಅಭಿಲೇಖಾಲಯ ಪ್ರಾರಂಭಿಸಿ, ಕ್ಯಾಟಲಾಗ್ ಇಂಡೆಕ್ಸ್ ಮಾಡಿ ೨೦೨೬ರ ಹೊಸ ವರ್ಷವನ್ನು ಹೊಸ ಸುಸಜ್ಜಿತ ಅಭಿಲೇಖಾಲಯದೊಂದಿಗೆ ಪ್ರಾರಂಭಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

ಇದನ್ನೂ ಓದಿ:-ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಅಭಿಲೇಖಾಲಯ ನಿರ್ವಹಣೆಯನ್ನು ಸೂಕ್ತವಾಗಿ ಮಾಡಿದಲ್ಲಿ ಇ-ಸ್ವತ್ತು ಸಂಬಂಧಿಸಿದ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸಿ ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಹಾಗೂ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹೊಸ ಇ-ಸ್ವತ್ತು ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ
ಇ-ಸ್ವತ್ತು ತಂತ್ರಾಂಶದಲ್ಲಿ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಹಾಗೂ ಹೊಸ ತಂತ್ರಾಂಶದ ಕಾರ್ಯವಿಧಾನದ ಬಗ್ಗೆ ಸಾರ್ವಜನಿಕರಲ್ಲಿ ಅಭಿಯಾನ ಮಾದರಿಯಲ್ಲಿ ಅರಿವು ಮೂಡಿಸಲು ಗ್ರಾ.ಪಂ.ಗಳು ಮುಂದಾಗಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

೧೦೦ರಷ್ಟು ಪ್ರಗತಿ ಸಾಧಿಸಲು ಸೂಚನೆ:
ಪ್ರಸಕ್ತ ಸಾಲಿನ ಬೇಡಿಕೆಗೆ ಅನುಗುಣವಾಗಿ ಶೇ.೧೦೦ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

Tags:
error: Content is protected !!