ಮಂಡ್ಯ

ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದ ಸಿಇಒ ಯುಕೇಶ್ ಕುಮಾರ್

ಹೆಚ್.ಡಿ.ಕೋಟೆ : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಲ್ಲಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಫಾಲಕ ಅಭಿಯಂತರರಿಗೆ ಸೂಚಿಸಿದರು.

ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ ಕಾಮಗಾರಿಗಳ ಪರಿವೀಕ್ಷಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರನ್ನು ಮನೆ ಮನೆ ಗಂಗೆ ಕಾರ್ಯಕ್ರಮದ ಮೂಲಕ ಪೂರೈಸಲಾಗುತ್ತಿದೆ ಎಂದರು.

ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಫಲಕ ಇಂಜಿನಿಯರ್ ಎ.ಎಸ್ ರಂಜಿತ್ ಕುಮಾರ್, ಹೆಚ್.ಡಿ.ಕೋಟೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಫಾಲಕ ಇಂಜಿನಿಯರ್ ಗೋವಿಂದ ನಾಯಕ, ಕಿರಿಯ ಕಾರ್ಯಫಾಲಕ ಇಂಜಿನಿಯರ್ ಗಳಾದ ಮೋನಶ್ರೀ, ಕೆ.ಸುನೀಲ್, ನಾಗೇಶ್, ಮೋಹನ್ ರಾಜ್, ಜಲ ಜೀವನ್ ಮಿಷನ್ ಜಿಲ್ಲಾ ಸಮಾಲೋಕರಾದ ಚೇತನ್ ಕುಮಾರ್ ಹಾಗೂ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ಹೆಚ್.ಟಿ.ಪ್ರಭಾಕರ, ಅಶ್ವಿನಿ, ಸಂತೋಷ್ ನಾಗ್, ಕೆ.ಪಿ.ಸುರೇಶ್, ನರಸಿಂಹ ಮೂರ್ತಿ, ಭಾಗ್ಯ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago