Mysore
34
scattered clouds

Social Media

ಗುರುವಾರ, 23 ಏಪ್ರಿಲ 2026
Light
Dark

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ.

ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲು ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿನಿಯರ ಓಲೆ, ಸರ, ದಾರ ಸೇರಿದಂತೆ ಯಾವುದೇ ಆಭರಣಗಳನ್ನು ತೆರವುಗೊಳಿಸಲು ಪರೀಕ್ಷಾ ಪರಿವೀಕ್ಷಕರು ಸೂಚಿಸಿದ್ದಾರೆ.

ಬಳಿಕ ವಿದ್ಯಾರ್ಥಿಗಳ ಮುಖ ಸ್ಕ್ಯಾನಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಈ ಕ್ರಮವು ಪರೀಕ್ಷೆಯಲ್ಲಿ ಪಾರದರ್ಶಕತೆ ಮತ್ತು ನಕಲು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗಿದೆ.

Tags:
error: Content is protected !!