ಮಂಡ್ಯ

ಕಾವೇರಿಗಾಗಿ ಬಿಜೆಪಿ ಕಾರ್ಯಕರ್ತರ ಚಡ್ಡಿ ಮೆರವಣಿಗೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.

ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರೆದಾಗುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್ ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ದೂರಿದರು.

ನೀರು ಬಿಡುವುದಿಲ್ಲ ಎಂದು ಹೇಳಿದ ಸರ್ಕಾರ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ, ಕಾವೇರಿ ಕಣಿವೆ ರೈತರಿಗೆ ಒಂದು ಬೆಳೆಗೂ ನೀರಿಲ್ಲ. ಆದರೆ ತಮಿಳುನಾಡಿಗೆ ಮೂರನೇ ಬೆಳೆಗೆ ಸಾಕಾಗುವಷ್ಟು ನೀರು ಬಿಡುತ್ತಿದೆ, ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.

ಇದೇ ರೀತಿ ನೀರು ಹರಿಸುತ್ತಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ, ಪರಿಸ್ಥಿತಿಯನ್ನು ಅರಿತು ತಕ್ಷಣ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ, ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ನೇತೃತ್ವ ವಹಿಸಿದ್ದರು.

lokesh

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago