ಮಂಡ್ಯ

57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜು ಸ್ಥಾಪನೆ: ಚಲುವರಾಯಸ್ವಾಮಿ

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಇಂದು(ಡಿ.2) ಆಯೋಜಿಸಲಾಗಿದ್ದ ನೂತನ ಕೃಷಿ ಮಹಾವಿದ್ಯಾಲಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ನೀಡಲು ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಮೌಲ್ಯಯುತ ಶಿಕ್ಷಣ ನೀಡುವುದಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ.

ನಮ್ಮ ರಾಜ್ಯದಲ್ಲಿ 2013ರಿಂದ ಎಲ್ಲಾ 6 ಕೃಷಿ, ತೋಟಗಾರಿಕೆ ಮತ್ತು ಪಶುಸಂಶೋಧನಾ ವಿಶ್ವವಿದ್ಯಾಲಯಗಳಿಗೆ, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಂತೆ ಸಿಇಟಿ ಮುಖಾಂತರ ಮೆರಿಟ್ ಆಧಾರದ ಮೇರೆಗೆ ಸೀಟುಗಳನ್ನು ಒದಗಿಸಲು ಆರಂಭಿಸಲಾಯಿತು. ಅಂದಿನಿಂದ ಇಂದಿನವರೆಗೂ ಕೃಷಿ ಸ್ನಾತಕ ಪದವಿಯನ್ನು ಕಲಿಯಲು ಇಚ್ಚಿಸುವ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ 23 ಸಾವಿರದಿಂದ ಪ್ರಸ್ತುತ ವರ್ಷಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿಯಲ್ಲಿ ಕೃಷಿ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ 6 ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಪದವಿಗೆ ಕೇವಲ 5000 ಸೀಟುಗಳನ್ನು ತುಂಬಲು ಅವಕಾಶವಿದೆ. ಆದರೆ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಕೃಷಿ ಶಿಕ್ಷಣವನ್ನು ವ್ಯಾಸಂಗ ಮಾಡಲು ಅಪೇಕ್ಷಿಸುತ್ತಿರುವುದರಿಂದ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿರುವ ಹಿನ್ನಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

5 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

7 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

9 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

11 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago