ಮಂಡ್ಯ : ರಾಜ್ಯ ಸರ್ಕಾರ ಬೀಳಲಿದೆ ಎಂಬ ಸಚಿವ ಸೋಮಣ್ಣ ಹೇಳಿಕೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ʼಅವರನ್ನು ಕಾಯ್ತಾ ಇರಲು ಹೇಳಿ. ಅವರೇನು ರಾಜ್ಯಕ್ಕೆ ಬರ್ತಾರಾ. ಹಾಗೆ ನೋಡಿದ್ರೆ ನಮ್ಮ ಸರ್ಕಾರ ಸುಭದ್ರವಾಗಿದ್ದು ಕೇಂದ್ರ ಸರ್ಕಾರವೇ ಅಪಾಯದಲ್ಲಿದೆ ಎಂದರು. ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಮಾತನಾಡಿ, ಚುನಾವಣೆ ಘೋಷಣೆಯಾಗಲಿ ಅಲ್ಲಿ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸ್ತೀವಿ. ಯೋಗೇಶ್ವರ್ ಎತ್ತರದಲ್ಲಿದ್ದಾರೆ. ಕುಮಾರಸ್ವಾಮಿ ಅವರಿಗಿಂತಲೂ ಎತ್ತರದಲ್ಲಿದ್ದಾರೆ. ಅವರ ಹಾಗೆ ನಾವು ತೊಡೆ ತಟ್ಟುವ ಸ್ಥಿತಿಯಲ್ಲಿ ಇಲ್ಲʼ ಎಂದು ಪ್ರತಿಕ್ರಿಯಿಸಿದರು.
ಇದೇ ಸಂದರ್ಭ ಸಂಡೂರು ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿರುವ ವಿಚಾರಕ್ಕೆ ಮಾತನಾಡಿ, ಈ ಹಿಂದೆ ಅವರು ಸಿಎಂ ಆಗಿದ್ದಾಗ ಆ ಯೋಜನೆ ವಿರೋಧಿಸಿದ್ದರು. ಆ ಪ್ರದೇಶದಲ್ಲಿ ಗಣಿಗಾರಿಕೆ ಹೋದವರು ಅಧಿಕಾರ ಕಳ್ಕೊತ್ತಾರೆ ಎಂಬ ನಂಬಿಕೆ ಇದೆ. ಕುಮಾರಸ್ವಾಮಿ ರಾಜ್ಯದ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡ್ತಾರೆ ಎಂಬ ವಿಶ್ವಾಸ ಇದೆ. ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡಿದ್ರೆ ನಮ್ಮದೂ ಸಹಕಾರ ಇದೆ. ಕುಮಾರಸ್ವಾಮಿ ವರ್ಸಸ್ ರಾಜ್ಯ ಸರ್ಕಾರ ಎಂಬಂಥಹ ಸ್ಥಿತಿ ನಿರ್ಮಾಣವಾಗಿಲ್ಲ ಎಂದರು.





