ಮಂಡ್ಯ

ಆದಿ ಚುಂಚನಗಿರಿ ಮಠ ವಿಭಜಿಸಿದ್ದು, ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದು ಜೆಡಿಎಸ್:‌ ಚಲುವರಾಯಸ್ವಾಮಿ ಕಿಡಿ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್‌ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಅನ್ನು ಟ್ಯಾಪ್‌ ಮಾಡಿಸಿದ್ದರು. ಈಗ ಹೇಗೆ ಹೋಗಿ ಆಶೀರ್ವಾದ ಕೇಳ್ತಾ ಇದ್ದಾರೆ. ನಾವೂ ಸಹ ಜೆಎಸ್‌ಎಸ್‌, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಹೋಗಿದ್ದೇವೆ, ಅವರೂ ಹೋಗಿದ್ದಾರೆ, ಚುನಾವಣೆ ವೇಳೆ ಇದು ಸಹಜ ಎಂದರು.

ಕುಮಾರಸ್ವಾಮಿ ಸ್ವಾಮೀಜಿ ಫೋನ್‌ ಟ್ಯಾಪ್‌ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯದ ಮಠ ಆದರೂ ಸಹ ಅದು ರಾಜ್ಯದ ಅತ್ಯಂತ ಜಾತ್ಯಾತೀತ ಮಠ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದ ಬಾಲಗಂಗಾಧರನಾಥ ಶ್ರೀಗಳಿಗೆ ಜೆಡಿಎಸ್‌ ಇಷ್ಟು ಕಿರುಕುಳ ಕೊಟ್ಟಿದೆ ಎಂದು ಗೊತ್ತಿದೆ. ಈಗ ಚುನಾವಣೆ ಬಂದಿದೆ, ಅದಕ್ಕೆ ಕುಮಾರಸ್ವಾಮಿ ಮಠಕ್ಕೆ ಹೋಗ್ತಾ ಇದ್ದಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ಹೇಳಿದರು.

andolana

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

37 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago