ಮಂಡ್ಯ: ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವ್ಯಂಗವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ, ನಾವು, ನಮ್ಮ ಜನ ಏನೋ ಮಾಡಿಕೊಳ್ಳುತ್ತೇವೆ. ನೀವು ಪ್ರಧಾನಿಯಾಗಿ, ಇನ್ನೊಮ್ಮೆ ಸಿಎಂ ಆಗಿ, ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುವುದಿಲ್ಲ. ಆದರೆ ನಮ್ಮ ಜಿಲ್ಲೆಯ ತಂಟೆಗೆ ಮಾತ್ರ ಬರಬೇಡಿ ಎಂದು ಟೀಕಿಸಿದ್ದಾರೆ.
ಚಿಕ್ಕಬಳ್ಳಾಪುರ, ತುಮಕೂರು ಮುಗಿಸಿ ಈಗ ಮಂಡ್ಯಕ್ಕೆ ಬರುತ್ತಿದ್ದಾರೆ. ಪಾಪ, ಪುಟ್ಟರಾಜು ಕೈಯಲ್ಲಿ ಸಭೆ ಮಾಡಿಸಿದರು. ಆಯೋಧ್ಯೆಯ ರಾಮಮಂದಿರ ಸೇರಿ ಹಲವು ದೇವಾಲಯಗಳನ್ನು ಸುತ್ತಿಸಿದರು. ಈಗ ತಾನೇ ಅಭ್ಯರ್ಥಿ ಅಂದರೆ ಪುಟ್ಟರಾಜು ಕತೆ ಏನಾಗಬೇಕು ನಾನು ಕಾಂಗ್ರೆಸ್ ಸೇರಿ ಬಚಾವ್ ಆದೆ ಎಂದರು.
ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು ನಿಂದಿಸಿದರು. ಆದರೆ ಈಗ ಅಕ್ಕ ಎನ್ನುತ್ತಿದ್ದಾರೆ. ಆಗಲೇ ಈ ಮಾತು ಹೇಳಿದ್ದರೆ ಅಂಬರೀಷ್ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಬಗ್ಗೆ ಕ್ಷೇತ್ರದಾದ್ಯಂತ ಉತ್ತಮ ಅಭಿಪ್ರಾಯಯವಿದ್ದು, ನಮ್ಮ ವಿರುದ್ಧ ಯಾರೇ ಅಭ್ಯರ್ಥಿಯಾದರೂ ನಮಗೆ ಚಿಂತೆ ಇಲ್ಲ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…