ಮಂಡ್ಯ

ಬಿಜೆಪಿಯವರನ್ನು ನೋಡಿದರೆ ನನ್ನ ಹೊಟ್ಟೆ ಉರಿಯುತ್ತೆ: ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಮಾತನಾಡಲು ಏನೂ ಉಳಿದಿಲ್ಲ.‌ ಮೀನು ಕ್ಷಣದಲ್ಲೇ ಕೈಯಿಂದ ಜಾರಿ ಹೋದಂತೆ ಏನೂ ಸಿಗುತ್ತಿಲ್ಲ. ಹಾಗಾಗಿ ಜಾತಿ ಗಣತಿ ವರದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಜಾತಿ ಗಣತಿ ವರದಿ ಬಗ್ಗೆ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿ ಏನೇನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ಸುಮ್ಮನೆ ಯಾರೂ ಕೂಡ ಮಾತನಾಡಬಾರದು. ಜಾತಿ ಗಣತಿ ಬಗ್ಗೆ ಊಹಾಪೋಹ ಎಬ್ಬಿಸುವುದು ಸರಿಯಲ್ಲ. ಜಾತಿ ಗಣತಿಯಿಂದ ಯಾವ ಸಮುದಾಯಕ್ಕೂ ಅನ್ಯಾಯ ಆಗಲ್ಲ. ಈಗಾಗಲೇ ವರದಿ ಸಚಿವ ಸಂಪುಟದಲ್ಲಿ ಮಂಡನೆ ಆಗಿದೆ. ವರದಿ ಬಗ್ಗೆ ಕೂಲಂಕುಷವಾಗಿ ಚರ್ಚೆ ಆಗಬೇಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago