ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್‌ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಆ ವೇಳೆ ಪ್ರವಾಸಿಗರು ಹಾಗೂ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿಯೂ ನಡೆದಿದೆ. ವಾರದ ಹಿಂದೆಯೇ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯಇಲಾಖೆ ಬೋನು ಇಟ್ಟಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಆದರೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿದೆ.
ಇಂದು ಪ್ರವೇಶ ನಿಷೇಧ:
ಶನಿವಾರ ಕೆಆರ್‌ಎಸ್ ಬೃಂದಾವನ ಪ್ರವಾಸಿಗರ ಪ್ರವೇಶ ನಿಷೇಧಿಸಿ ಕಾವೇರಿ ನೀರಾವರಿ ನಿಗಮ ಇಇ ರಾಮಮೂರ್ತಿ ಆದೇಶ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿತ್ತು. ಆ ವೇಳೆ ಅರಣ್ಯಇಲಾಖೆ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಪ್ರವಾಸಿಗರಿಗೆ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು.ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…