ಮಂಡ್ಯ

ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ : ರೋಗಿಗಳಿಗೆ ಹಣ್ಣು ವಿತರಣೆ

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣ ಅವರ ನಂತರದ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಂ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು ಎಂದು ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಬಣ್ಣಿಸಿದರು.

ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ವಿದ್ಯಾನಗರದಲ್ಲಿರುವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮಂಡ್ಯಕ್ಕೆ ಮೆಡಿಕಲ್ ಕಾಲೇಜನ್ನು ತಂದರು. ಕೃಷಿ ಮಂತ್ರಿಯಾಗಿ ಕೃಷಿ ವಿಶ್ವವಿದ್ಯಾನಿಲಯ ತಂದು, ನನೆಗುದಿಗೆ ಬಿದ್ದಿದ್ದ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿದ್ದಾರೆ. ಜಿಲ್ಲೆಯು ಸಮಗ್ರವಾದ ಅಭಿವೃದ್ಧಿಯತ್ತ ಸಾಗುವ ನಿಟ್ಟಿನಲ್ಲಿ ಅವರ ನಾಯಕತ್ವ ಮುನ್ನಡೆಯಲಿ ಎಂದು ಹೇಳಿದರು.

ಮಿಮ್ಸ್ ಆವರಣದ ಮಮತೆಯ ಮಡಿಲುವಿನಲ್ಲಿ ರೋಗಿಗಳಿಗೆ ಮತ್ತು ಅವಲಂಬಿತರಿಗೆ ಉಪಾಹಾರ ಹಾಗೂ ಊಟದ ವ್ಯವಸ್ಥೆ, ಹಣ್ಣು ಹಂಪಲು ವಿತರಣೆ, ಸೇವಾಕಿರಣ ವೃದ್ಧಾಶ್ರಮದ ವೃದ್ಧರಿಗೆ ಮಡಿವಾಳ ಸಮಾಜದ ಕಾಂಗ್ರೆಸ್ ಮುಖಂಡ ಹಳುವಾಡಿ ವೆಂಕಟೇಶ್ ನೇತೃತ್ವದಲ್ಲಿ ಬೆಡ್‌ಶೀಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಮಾತನಾಡಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ರಾಜಕಾರಣದಲ್ಲಿ ಇನ್ನೂ ಉತ್ತಮ ಅವಕಾಶಗಳು ಲಭಿಸಲಿ ಎಂದು ಹಾರೈಸಿದರು.

ಮಾಜಿ ಶಾಸಕ ಎಚ್.ಬಿ.ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನೀಲಾಮೂರ್ತಿ, ವಿಜಯಲಕ್ಷ್ಮಿ ರಘುನಂದನ್, ಬೇಲೂರು ಸೋಮಶೇಖರ್, ಕೆರಗೋಡು ಸೋಮಶೇಖರ್, ಅಭಿಲಾಶ್, ಅಪ್ಪಾಜಿಗೌಡ, ಶ್ರೀಧರ್, ನವೀನ್, ಶಂಕರಲಿಂಗೇಗೌಡ, ದೀಪಕ್, ಶಿವನಂಜು, ಸುಂಡಹಳ್ಳಿ ಮಂಜುನಾಥ್, ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಚಂದಗಾಲು ವಿಜಯ್‌ಕುಮಾರ್, ಕೃಷ್ಣ, ನಾಗೇಶ್, ಸೋಮಶೇಖರ್ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 mins ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

8 mins ago

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

21 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago