Mysore
27
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ರಸ್ತೆಗಳ ಅಭಿವೃದ್ಧಿಗೆ ಕ್ರಮ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೆಲವು ರಸ್ತೆಗಳು ಗುಂಡಿ ಬಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅವುಗಳ ದುರಸ್ತಿ ಪಡಿಸಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

ಅವರು ಇಂದು ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದವರೆಗೆ ರಸ್ತೆ ತಪಾಸಣೆ ಮಾಡಿ ಜಕ್ಕನಹಳ್ಳಿ ಗ್ರಾಮದಲ್ಲಿ 20 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಗೊಳ್ಳಲಿರುವ ಹೇಮಾವತಿ ನಾಲೆ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಮಂಡ್ಯ ದಿಂದ ದುದ್ದವರೆಗಿನ ರಸ್ತೆಯು ಸರಿ ಇಲ್ಲದ ಕಾರಣ ಅದರ ತಪಾಸಣೆಯನ್ನು ಇಂದು ಜಿಲ್ಲಾಧಿಕಾರಿ ಅವರು ಶಾಸಕರು, ನ್ಯಾಷನಲ್ ಹೈವೇ ಅವರೊಡನೆ ಪರಿಶೀಲಿಸಿ ತಪಾಸಣೆ ನಡೆಸಿ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

20 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಗೊಳ್ಳಲಿರುವ ಹೇಮಾವತಿ ನಾಲೆ ಕಾಮಗಾರಿಯನ್ನು ಆದಷ್ಟು ಬೇಗನೆ ಕಾಮಗಾರಿ ಕೈಗೊಳ್ಳುತ್ತೇವೆ ಮತ್ತು ಇದರ ಜೊತೆಗೆ ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗ ಕೂಡ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಮೇಲುಕೋಟೆ ವಿಧಾನಸಭಾ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ ಜಕ್ಕನಹಳ್ಳಿ ಗ್ರಾಮಕ್ಕೆ ಆಸ್ಪತ್ರೆಯ ವ್ಯವಸ್ಥೆ ಇಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ಆಸ್ಪತ್ರೆಯ ವ್ಯವಸ್ಥೆ ಆಗಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿಯನ್ನು 20 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಿಸಲು ಅನುಮೋದನೆ ನೀಡಲಾಗಿತ್ತು. ಚುನಾವಣೆ ಸೇರಿದಂತೆ ಇನ್ನಿತರೆ ಕಾರಣಗಳಿಂದ ಶಂಕುಸ್ಥಾಪನೆ ತಡವಾಗಿದೆ‌. ಸಾರ್ವಜನಿಕರಿಗೆ ಸಹಾಯಕವಾಗುವ ಹಲವಾರು ಕೆಲಸಗಳನ್ನು ಆದ್ಯತೆಯ ಮೇಲೆ ಮಾಡಲಾಗುವುದು ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕುರಿತಂತೆ ಸಚಿವರ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಇಂದು ಹೊಳಲು ಗ್ರಾಮದಿಂದ ಜಕ್ಕನಹಳ್ಳಿಯವರೆಗಿನ ರಸ್ತೆ ಪರಿಶೀಲನೆ ನಡೆಸಲಾಗಿದೆ ಎಂದರು.

Tags: