Mysore
72
clear sky

Social Media

ಶನಿವಾರ, 24 ಜನವರಿ 2026
Light
Dark

ಮಳವಳ್ಳಿ| ಕಾಂಗ್ರೆಸ್ ಭದ್ರಕೋಟೆ ಸಾಬೀತಿಗೆ ಶ್ರಮಿಸಿ: ಕಾರ್ಯಕರ್ತರಿಗೆ ಸಚಿವ ಚಲುವರಾಯಸ್ವಾಮಿ ಕರೆ

ಮಳವಳ್ಳಿ: ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಆ ಖ್ಯಾತಿಗೆ ತಕ್ಕಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಜಿಲ್ಲಾ ಪಂಚಾಯಿತಿ ಗದ್ದುಗೆ ಪಕ್ಷದ ತೆಕ್ಕೆಗೆ ತರಲು ತಾಲ್ಲೂಕಿನ ಮತದಾರರು, ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು.

ಪಟ್ಟಣದ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಆಯೋಜಿಸಿದ್ದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಹೊರತುಪಡಿಸಿ ಸಹಕಾರಿ ಸಂಸ್ಥೆ ಹಾಗೂ ಹಾಲು ಒಕ್ಕೂಟದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಪಾರಮ್ಯ ಮೆರೆದಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರ ಚುನಾವಣೆಯಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲೆಡೆ ಸಭೆ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು

Tags:
error: Content is protected !!