ಮಳವಳ್ಳಿ: ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಆ ಖ್ಯಾತಿಗೆ ತಕ್ಕಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಜಿಲ್ಲಾ ಪಂಚಾಯಿತಿ ಗದ್ದುಗೆ ಪಕ್ಷದ ತೆಕ್ಕೆಗೆ ತರಲು ತಾಲ್ಲೂಕಿನ ಮತದಾರರು, ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಆಯೋಜಿಸಿದ್ದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಹೊರತುಪಡಿಸಿ ಸಹಕಾರಿ ಸಂಸ್ಥೆ ಹಾಗೂ ಹಾಲು ಒಕ್ಕೂಟದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಪಾರಮ್ಯ ಮೆರೆದಿದ್ದಾರೆ.
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರ ಚುನಾವಣೆಯಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲೆಡೆ ಸಭೆ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…