ಮಂಡ್ಯ

ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮದ್ದೂರಿನ ಗೊರವನಹಳ್ಳಿಯಲ್ಲಿ ಮೃತ ಹೃತೀಕ್ಷಾ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಕ್ರಮ ವಹಿಸಬೇಕು. ಪ್ರಕರಣ ಸಂಬಂಧ ಮುನ್ನೆಚ್ಚರಿಕೆಯಾಗಿ ಮೂರು ಜನ ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಐಜಿ, ಎಸ್ಪಿ ಜೊತೆ ಮಾತನಾಡಿದ್ದೇನೆ. ತನಿಖೆ ಮಾಡಿಸಿ ಮುಂದಿನ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಪೋಷಕರ ಕಣ್ಣೀರು ಎಲ್ಲರಿಗೂ ದುಃಖ ಬರುತ್ತೆ. ಕಣ್ಣ ಮುಂದೆ ಮಗುವನ್ನು ಬದುಕಿಸಿಕೊಳ್ಳಲು ಆಗಿಲ್ಲ. ಇದರಲ್ಲಿ ಡಾಕ್ಟರ್‌ಗಳದ್ದೂ ತಪ್ಪಿದೆ. ಡಿಸಿ, ಸಿಇಓ, ಎಸ್ಪಿ ಜೊತೆ ಸಭೆ ಮಾಡಿ ಪೊಲೀಸರ ನಿರ್ಲಕ್ಷ್ಯತೆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಪೋಷಕರಿಗೆ ಹಣ ಮುಖ್ಯವಲ್ಲ. ಈಗ ಅವರು ಮಗು ಕಳೆದುಕೊಂಡ ಸಂಕಟದಲ್ಲಿದ್ದಾರೆ. ಸಿಎಂ ಪರಿಹಾರ ನಿಧಿ ಬರೆಯಲು ಹೇಳಿದ್ದೇನೆ ಎಂದರು. ಪೊಲೀಸರಿಂದ ಪರಿಶೀಲನೆ ಆಗೋದು ಸಹಜ. ಎಲ್ಲರೂ ಹೆಲ್ಮೆಟ್ ಹಾಕಬೇಕು, ಪೊಲೀಸರು ಕೂಡ ನೋಡಿಕೊಂಡು ವರ್ತಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು. ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ಪಕ್ಕಾ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago