ಮಂಡ್ಯ

ಬಿಜೆಪಿ-ಜೆಡಿಎಸ್ ಮೇಲೆ ಒಂದಲ್ಲ ಎರಡಲ್ಲ 108 ಹಗರಣಗಳಿವೆ: ಚೆಲುವರಾಯಸ್ವಾಮಿ

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ಮೇಲೆ ಒಂದಲ್ಲ ಎರಡಲ್ಲ 108 ಹಗರಣಗಳಿವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

ಇಂದು (ಆ.06) ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರಿನಲ್ಲಿ ಸಭೆಯನ್ನು ಮಾಡಿ ಇಂದು ಮಂಡ್ಯದಲ್ಲಿ ಸಭೆಯನ್ನು ಕೈಗೊಂಡಿದ್ದೇವೆ. ಅಂತಿಮವಾಗಿ ಮೈಸೂರಿನಲ್ಲಿ ಆಗಸ್ಟ್ 9ರಂದು ಬೃಹತ್ ಜನಾಂದೋಲನ ಸಭೆಯು ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಸಭೆಯನ್ನು ಆಯೋಜಿಸಲಾಗಿದ್ದು, ಕಾಂಗ್ರೆಸ್ ನ ಸಚಿವರು ಶಾಸಕರ ಮುಖಂಡರು ಕಾರ್ಯಕರ್ತರು ಭಾಗಿಯಾಗುತ್ತಾರೆ ತಾವೆಲ್ಲರೂ ಆ ಸಭೆಗೆ ಆಗಮಿಸಬೇಕು ಎಂದರು.

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಅಶ್ವಥ್ ನಾರಾಯಣ್, ವಿಜಯೇಂದ್ರ ಇವರ ನಾಲ್ಕು ಜನರ ನಾಯಕತ್ವದಲ್ಲಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ನಡೆಯುತ್ತಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರಂಭದಲ್ಲಿ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದು ನಂತರದಲ್ಲಿ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಶಾಸಕರಾದ ಅಶೋಕ್ ಮತ್ತು ಅಶ್ವತ್ ನಾರಾಯಣ್ ಅವರದ್ದು ಒಂದು ಗುಂಪು, ವಿಜಯೇಂದ್ರ ಅವರದ್ದು ಒಂದು ಗುಂಪು ಬಿಜೆಪಿಯಲ್ಲಿ ಈ ಕುರಿತು ಬಹಳ ಗೊಂದಲವಿದೆ ಎಂದು ವ್ಯಂಗ್ಯ ಮಾಡಿದರು.

ಮುಡಾ ವಿಚಾರ ಹಗರಣವಲ್ಲ. ಇದರಲ್ಲಿ ಮುಖ್ಯಮಂತ್ರಿಗಳ ಹಸ್ತಕ್ಷೇಪವಿಲ್ಲ. ಅವರ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರವಾಗಿ ಐವತ್ತು ನೂರು ಸೈಟ್ಗಳನ್ನು ಹಂಚಿದ್ದಾರೆ, ಇವುಗಳ ತನಿಖೆಗೆ ಹೋದರೆ ನೂರಾರು ಜನರು ಜೈಲು ಪಾಲಾಗಬೇಕಾಗುತ್ತದೆ ಹಾಗಾಗಿ ಇದನ್ನು ಕೈ ಬಿಡಬೇಕು ಎಂದು ಬಿಜೆಪಿ ಜೆಡಿಎಸ್ ನವರು ಚರ್ಚೆ ನಡೆಸಿಕೊಂಡು, ಈಗ ಹಿಂದೆ ಹೋದರೆ ಅವಮಾನವಾಗುತ್ತದೆ ಇದನ್ನು ಸಮರ್ಥನೆ ಮಾಡಿಕೊಳ್ಳಲು ಪಾದ ಯಾತ್ರೆ ಕೈಗೊಳ್ಳೋಣ ಎಂದು ಪಾದಯಾತ್ರೆಯನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಜೆಡಿಎಸ್ ನ ಪಾದಯಾತ್ರೆಗೆ ತಿರುಗೇಟು ನೀಡಿದರು.

ರಾಜ್ಯದ ಜನತೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ನಂಬಿ 136 ಸೀಟುಗಳನ್ನು ಗೆಲ್ಲಿಸಿದ್ದಾರೆ. ರಾಜ್ಯದ ಜನತೆಯ ಸಮಸ್ಯೆಗಳು ನಮಗೆ ಮುಖ್ಯ. ಒಂದು ವರ್ಷ ರಾಜ್ಯದಲ್ಲಿ ರೈತರ ಬರಗಾಲ ಸಮಸ್ಯೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸಿದ್ದೇವೆ ಇದು ತಪ್ಪಾ ಎಂದು ಜೆಡಿಎಸ್-ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು‌.

ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗದವರಿಗೆ, ರೈತರಿಗೆ ಪ್ರತಿ ಮನೆಗೆ ನಾಲ್ಕರಿಂದ ಐದು ಸಾವಿರ ತಲುಪುವ ಕಾರ್ಯಕ್ರಮವನ್ನು ನೀಡಿರುವುದು ತಪ್ಪಾ? ಇದು ಹೊಟ್ಟೆ ಹುರಿನಾ ನಿಮಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ ಎಂದರು.

ಪ್ರಸ್ತುತದಲ್ಲಿ 136 ಸೀಟುಗಳನ್ನು ಗೆದ್ದಿರುವ ಕಾಂಗ್ರೆಸ್, ಗ್ಯಾರಂಟಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರೆ ಮುಂದೆ ಕರ್ನಾಟಕವನ್ನು ನಾವು ಮರೆಯಬೇಕಾಗುತ್ತದೆ ಎಂಬ ಭಯ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಿದ್ದೆಗೆಡಿಸಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿ 27 ಸ್ಥಾನದಿಂದ 17 ಸ್ಥಾನ ಗೆದ್ದು ಪಾರ್ಲಿಮೆಂಟ್ ಗೆ ಹೋಗಿದ್ದೀರಾ ನಾವು ಒಂದು ಸ್ಥಾನ ಗೆದ್ದಿದ್ದು ಪ್ರಸ್ತುತ 9 ಸ್ಥಾನಗಳನ್ನು ಗೆದ್ದಿದ್ದೇವೆ ಇದರಿಂದ ನಿದ್ದೆಗೆಟ್ಟು ಪಾದಯಾತ್ರೆ ಅಂತಹ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್, ಕೋವಿಡ್, ಭೂ, ಪಿಎಸ್ಐ, ಬಿಟ್ ಕಾಯಿ, ಮೊಟ್ಟೆ, ಸೇವಾ ತೆರಿಗೆ ಹಣ, ಬ್ಯಾಂಕ್ ಸಾಲ ಹಗರಣ ಮಾಡಿದ್ದಾರೆ. ಇದಕ್ಕೆ ಕಾನೂನು ಬದ್ಧವಾಗಿ ತನಿಖೆಯಾಗಿ ಕ್ರಮವಾಗುತ್ತದೆ. ನಮ್ಮ ಸರ್ಕಾರ ಜವಾಬ್ದಾರಿಯನ್ನು ನಾವು ನಿಭಾಯಿಸೋಣ ಎಂದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಕಸ್ಮಿಕವಾಗಿ ಬಂದಿದೆ. ಈ ಬಾರಿ ನಿಮ್ಮ ನಿರೀಕ್ಷೆಯಂತೆ ಜನಸಾಮಾನ್ಯರು ಮತ ನೀಡಿಲ್ಲ ಕೆಲವು ಸಣ್ಣಪುಟ್ಟ ವ್ಯತ್ಯಾಸದಿಂದ ಅಧಿಕಾರದಲ್ಲಿ ಕುಳಿತಿದ್ದೀರಾ ಕರ್ನಾಟಕಕ್ಕೆ ಘೋರ ಅನ್ಯಾಯಯವಾಗುತ್ತಿದೆ. ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ರಾಜ್ಯಕ್ಕೆ ಅತಿವೃಷ್ಟಿ ಸಮರ್ಪಕ ಅನುದಾನ ಕೊಡಲಿಲ್ಲ. ಕಳೆದ ಒಂದು ವರ್ಷದ ಬರಗಾಲಕ್ಕೆ ಕೇಂದ್ರದಲ್ಲಿ ನಮ್ಮಪತ್ರಕ್ಕೆ ಉತ್ತರ ಕೊಡಲಿಲ್ಲ ಸಭೆಗೆ ನಮಗೆ ಅವಕಾಶ ಕೊಡಲಿಲ್ಲ ಇಂದು ನ್ಯಾಯಾಲಯದ ಮೂಲಕ ನಾವು 3454 ಕೋಟಿಯನ್ನು ತಂದು ಬರ ಪರಿಹಾರ ಹಂಚುವಂತಹ ಪರಿಸ್ಥಿತಿ ನಮ್ಮ ಮುಂದೆ ಬಂದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

12 seconds ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

21 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

40 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

45 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

50 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

1 hour ago