Mysore
27
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಮೈಶುಗರ್‌ ಕಾರ್ಖಾನೆಗೆ ಬಾಯ್ಲರ್‌ಗೆ ಪೂಜೆ ಸಲ್ಲಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ ಎಂದರು.

2023-24 ನೇ ಸಾಲಿನಲ್ಲಿ 2,41,305 ಮೆ.ಟನ್ ಕಬ್ಬು ನುರಿಸಲಾಗಿರುತ್ತದೆ, ಹಾಗೂ ಕಬ್ಬು ಸರಬರಾಜು ಮಾಡಿದ ರೈತ-ಭಾಂದವರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿರುತ್ತದೆ.

ಈ ಬಾರಿ ಸರಿಯಾಗಿ ಮಳೆ ಬಾರದ ಕಾರಣ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ. ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿರುತ್ತದೆ. ಪ್ರಸ್ತುತ 1,90,000 ಮುರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ನಾನ್-ಒಪ್ಪಿಗೆ ಮತ್ತು ಹೊರಜಿಲ್ಲೆಯ ಮೂಲಕ ಕಬ್ಬನ್ನು ನುರಿಸಲಾಗುವುದು ಎಂದರು.

ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದರು.

Tags: