ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ ಎಂದರು.
2023-24 ನೇ ಸಾಲಿನಲ್ಲಿ 2,41,305 ಮೆ.ಟನ್ ಕಬ್ಬು ನುರಿಸಲಾಗಿರುತ್ತದೆ, ಹಾಗೂ ಕಬ್ಬು ಸರಬರಾಜು ಮಾಡಿದ ರೈತ-ಭಾಂದವರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿರುತ್ತದೆ.
ಈ ಬಾರಿ ಸರಿಯಾಗಿ ಮಳೆ ಬಾರದ ಕಾರಣ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ. ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿರುತ್ತದೆ. ಪ್ರಸ್ತುತ 1,90,000 ಮುರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ನಾನ್-ಒಪ್ಪಿಗೆ ಮತ್ತು ಹೊರಜಿಲ್ಲೆಯ ಮೂಲಕ ಕಬ್ಬನ್ನು ನುರಿಸಲಾಗುವುದು ಎಂದರು.
ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…