Mysore
28
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್‌ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ ನಡೆದಿತ್ತು. ಕಳೆದ ಒಂದು ತಿಂಗಳಿನಿಂದ ಸ್ಥಳಾಂತರ ಕೆಲಸ ನಡೆದಿದ್ದು, ಇಂದು ರಾಸಾಯನಿಕ ಟ್ಯಾಂಕ್‌ ತೆರವು ಮಾಡುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

 

Tags:
error: Content is protected !!