ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ ತಂದೆ ಸಿದ್ದರಾಜು ಹೆಚ್.ಜೆ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು ಮಗುವಿನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರವಾದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಶಾಸಕರು ಸೇರಿದಂತೆ ಮತ್ತಾವ ಜನಪ್ರತಿನಿಧಿಯೂ ನನ್ನ ಕುಟುಂಬಕ್ಕೆ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ ಎಂದು ಅಳಲು ತೋಡಿಕೊಂಡರು.
೧೪೮ ಕೆ.ಜಿ ತೂಕದ ಗೇಟ್ ಮುಗುವಿನ ಮೇಲೆ ಬಿದ್ದದ್ದರಿಂದ ತಲೆಗೆ ಪೆಟ್ಟುಬಿದ್ದು, ರಕ್ತದ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಮಗು ಮೃತವಾಗಿರುವುದನ್ನು ದೃಢ ಪಡಿಸಿದರು. ಶವಾಗಾರಕ್ಕೆ ತಹಸೀಲ್ದಾರ್ ಭೇಟಿ ನೀಡಿ, ಈ ಸಂಬಂಧ ನೋಡುವುದಾಗಿ ಹೇಳಿದ್ದು, ಬಿಟ್ಟರೆ ೧೦ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿರಲಿ, ಸಾಂತ್ವನ ಹೇಳಲೂ ಸಹ ಮುಂದಾಗಿಲ್ಲ ಎಂದು ಕಣ್ಣೀರಿಟ್ಟರು.
ದೂರು ದಾಖಲಾಗಿದ್ದರೂ ಪೊಲೀಸರು ಸಹ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಬಡವರೆಂದು ಅಸಡ್ಡೆ ತೋರಿದ್ದಾರೆ. ಸದರಿ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಿ ನ್ಯಾಯ ದೊರಕುವಂತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಕ್ರಮ ವಹಿಸುವಂತಾಗಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಮಗುವಿನ ತಾಯಿ ಸುಮಿತ್ರ, ಗ್ರಾಮದ ಸಾಗರ್, ಹರೀಶ್‌ಕುಮಾರ್, ಸಾಕಮ್ಮ, ಸಿ.ಚನ್ನಯ್ಯ ಇದ್ದರು.
ಸಾಂತ್ವನ ಹೇಳಿದ ಸಚ್ಚಿದಾನಂದ
ಸದರಿ ಘಟನೆಯ ಸಂಬಂಧ ಪತ್ರಕರ್ತರ ಭವನದ ಬಳಿಗೆ ಆಗಮಿಸಿದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಪ್ರಕರಣದ ಸಂಬಂಧ ಮಾಹಿತಿ ಪಡೆದು, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಘಟನೆ ನಡೆದು ಹತ್ತು ದಿನ ಕಳೆದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡಿ ಕನಿಷ್ಠ ಸಾಂತ್ವನ ಹೇಳದಿರುವುದು. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶಾಸಕ ತುಘಲಕ್ ಸರ್ಕಾರ ನಡೆಸುತ್ತಿರುವುದು ಹಾಗೂ ಅವರ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಆಗ್ರಹಿಸಿದರು.
ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಸಚ್ಚಿದಾನಂದ ಅವರು, ಸಿದ್ದರಾಜು ಅವರ ಮತ್ತೊಂದು ಮಗುವಿನ ಮುಂದಿನ ವಿದ್ಯಾಭ್ಯಾಸದ ದೃಷ್ಠಿಯಿಂದ ೨ ಲಕ್ಷ ರೂ ಠೇವಣಿ ಇಡುವ ಕೆಲಸ ಮಾಡುವುದಾಗಿ ಘೋಷಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…