ಮಂಡ್ಯ

ಜನವರಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ : ಸಚಿವ ಸಂತೋಷ್‌ಲಾಡ್ ಭರವಸೆ

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ತಾಲ್ಲೂಕಿನ ಕದಲೂರು ಗ್ರಾಮದ ಶಾಸಕ ಕೆ.ಎಂ.ಉದಯ ಅವರ ನಿವಾಸದಲ್ಲಿ ಶಾಸಕರಿಂದ ಮತ್ತು ಸ್ಥಳೀಯ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆ ವತಿಯಿಂದ ಮೂರು ಯೋಜನೆಗಳನ್ನು ಜಾರಿಗೊಳಿಸಲು ಅಗತ್ಯ ಕ್ರಮ ವಹಿಸಿದ್ದು, ಜನವರಿ ಅಥವಾ ಫೆಬ್ರವರಿ ಅಂತ್ಯದಲ್ಲಿ ಕಾರ್ಮಿಕ ಭವನ, ವಸತಿ ಶಾಲೆ ಮತ್ತು ಕಾರ್ಮಿಕ ಕಿಟ್ ವಿತರಿಸಲು ಕ್ರಮ ವಹಿಸಲಾಗುವುದೆಂದರು.

ಅದರಲ್ಲೂ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕೆಂಬ ಉದ್ದೇಶ ಹೊಂದಿದ್ದು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ವಿತರಿಸುವ ಜತೆಗೆ ಮೂರು ಅಂಶಗಳನ್ನು ತ್ವರಿತ ಗತಿಯಲ್ಲಿ ಪೂರೈಸಲು ಇಲಾಖೆ ಮುಂದಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳ ಅವಧಿಯಲ್ಲಿ ಕಾರ್ಮಿಕರಿಗೆ ೫೫ ಕೋಟಿ ರೂ.ಗಳನ್ನು ವಿತರಿಸಿದೆ. ಜತೆಗೆ ೧೩ ಲಕ್ಷ ಮಕ್ಕಳಿಗೆ ಅಗತ್ಯ ಸೌಲಭ್ಯವನ್ನು ಒಂದೇ ಅವಧಿಯಲ್ಲಿ ಪೂರೈಕೆ ಮಾಡಲಾಗಿದೆ. ಸೌಲಭ್ಯ ವಂಚಿತ ಕಾರ್ಮಿಕರ ಬಗ್ಗೆ ಮಾಹಿತಿಯಿದ್ದಲ್ಲಿ ಅದನ್ನು ಸರಿಪಡಿಸಿ ಅಗತ್ಯ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುವುದೆಂದರು.

ಇದನ್ನೂ ಓದಿ:-ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ

ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ಮೇಲೆ ಕಾರ್ಮಿಕರ ಆರ್ಥಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಿ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ಹಿಂದುಳಿದಿರುವ ಕಾರ್ಮಿಕರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಯಾವುದೇ ಸರ್ಕಾರಗಳು ಒಂದೇ ಅವಧಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಸೌಲಭ್ಯ ಕಲ್ಪಿಸಲು ಮುಂದಾಗುವುದಾಗಿ ತಿಳಿಸಿದರು.

ಶಾಸಕ ಕೆ.ಎಂ.ಉದಯ ಮಾತನಾಡಿ, ಕೇಂದ್ರ ಸರ್ಕಾರ ಇವಿಎಂ ಅನ್ನು ದುರುಪಯೋಗ ಪಡಿಸಿಕೊಂಡು ಆಡಳಿತ ನಡೆಸುತ್ತಿದೆ. ಈಗಾಗಲೇ ರಾಹುಲ್‌ಗಾಂಽಯವರು ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿರುವ ಮತಚೋರಿ ಪ್ರಕರಣಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದು, ಈ ಸಂಬಂಧ ನಾವು ಮದ್ದೂರು ಕ್ಷೇತ್ರದಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿರುವುದಾಗಿ ಹೇಳಿದರು.

ಈಗಾಗಲೇ ಹಲವು ರಾಜ್ಯಗಳಲ್ಲಿ ಮತಚೋರಿ ನಡೆದಿರುವ ಬಗ್ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಽಯವರು ದಾಖಲಾತಿ ಸಮೇತ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲೂ ಪಕ್ಷವು ನಿರಂತರ ಹೋರಾಟ ರೂಪಿಸುವುದಾಗಿ ತಿಳಿಸಿದರು.

ದೆಹಲಿಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಈ ಸಂಬಂಧ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಚಲುವರಾಜು, ಪಿ.ಸಂದರ್ಶ, ಕದಲೂರು ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ರಾಮಕೃಷ್ಣ, ಶಿವಲಿಂಗಯ್ಯ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

13 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

16 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

17 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

17 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

23 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

23 hours ago