Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಂಡ್ಯ| ಮೊಟ್ಟೆ ಕೊಟ್ಟಿದ್ದಕ್ಕೆ ಶಾಲೆ ತೊರೆದ ಮಕ್ಕಳು

children

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.

ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್‌ ಆಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.

ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.

Tags:
error: Content is protected !!