children
ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್ ಆಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.
ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…