ಮಂಡ್ಯ

ಶಾಲೆಗಳಲ್ಲಿ ಮಕ್ಕಳ ಕಲರವ : ಹೂ, ಸಿಹಿ ಕೊಟ್ಟು ಸ್ವಾಗತಿಸಿದ ಶಿಕ್ಷಕರು

ಮಂಡ್ಯ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದರು. ಅಂತೆಯೇ ಶಿಕ್ಷಕರು ಹೂವು ಹಾಗೂ ಸಿಹಿ ತಿನಿಸು ಕೊಟ್ಟು ಸ್ವಾಗತಿಸಿದರು. ಇನ್ನು ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮೊದಲ ದಿನ ಶೇ.60ರಷ್ಟು ಹೆಚ್ಚು ವಿದ್ಯಾರ್ಥಿಗಳು ಹಾಜರಾದರು. ರಜೆಯಿಂದಾಗಿ ಖಾಲಿ ಹೊಡೆಯುತ್ತಿದ್ದ ಶಾಲಾ ಆವರಣದಲ್ಲಿ ಮಕ್ಕಳ ಕಲರವ ಜೋರಾಗಿತ್ತು. ಇನ್ನು ವಿದ್ಯಾರ್ಥಿಗಳನ್ನು ಸೆಳೆಯಲು ಶಿಕ್ಷಕರು, ಎಸ್‌ಡಿಎಂಸಿ ಆಡಳಿತ ಮಂಡಳಿ ಹಲವು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ಶಾಲೆಗಳನ್ನು ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಶಾಲೆಗೆ ಹಾಜರಾದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಗುಲಾಬಿ ಹೂ ಹಾಗೂ ಚಾಕೊಲೇಟ್ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಎಲ್ಲ ಶಾಲೆಗಳಲ್ಲಿಯೂ ಬಿಸಿಯೂಟದ ಜತೆಗೆ ಸಿಹಿ ವಿತರಿಸಲಾಯಿತು. 1816 ಸರ್ಕಾರಿ, 160 ಅನುದಾನಿತ ಹಾಗೂ 469 ಅನುದಾನರಹಿತ, 83 ಸಮಾಜ ಕಲ್ಯಾಣ ಇಲಾಖೆ, 4 ಕೇಂದ್ರೀಯ ವಿದ್ಯಾಲಯ, 1 ಜವಾಹರ್ ನವೋದಯ ವಿದ್ಯಾಲಯಗಳು ಪುನಾರಂಭಗೊಂಡವು.

ಎತ್ತಿನಗಾಡಿಯಲ್ಲಿ ಬಂದ ಎಂಎಲ್‌ಎ: ತಾಲೂಕಿನ ಬಿ.ಹೊಸೂರು ಕಾಲನಿ ಸರ್ಕಾರಿ ಶಾಲೆಗೆ ಶಾಸಕ ರವಿಕುಮಾರ್ ಗಣಿಗ ಅವರು ಎತ್ತಿನಗಾಡಿ ಮೂಲಕ ಬಂದರು. ಈ ಸಂದರ್ಭ ಪೂರ್ಣಕುಂಭದೊಂದಿಗೆ ಶಾಸಕರನ್ನು ಶಾಲಾ ಮಕ್ಕಳು ಸ್ವಾಗತಿಸಿದರು. ಶಾಸಕರು ಮಕ್ಕಳಿಗೆ ಗುಲಾಬಿ ಹೂ, ಸಿಹಿ ಹಾಗೂ ಸಮವಸ್ತ್ರ, ಪುಸ್ತಕ ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಚೆನ್ನಾಗಿ ಓದಿ ಮುಂದೆ ಉನ್ನತ ಹುದ್ದೆ ಅಲಂಕರಿಸಬೇಕು. ಸರ್ಕಾರಿ ಶಾಲೆಗಳು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಇದರಿಂದಾಗಿ ಖಾಸಗಿ ಶಾಲೆಗಳ ಮೊರೆ ಹೋಗಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೈಕ್ಷಣಿಕ ಚಟುವಟಿಕೆ ಬದಲಾವಣೆ ಆಗಬೇಕು. ಶಾಲೆಗಳ ಅಭಿವೃದ್ಧಿಗೆ ನನ್ನಿಂದಾಗುವ ಸೇವೆ ಮಾಡುತ್ತೇನೆ. ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಮಕ್ಕಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ಸಹ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ಸಹಕರಿಸಿ. ಮಕ್ಕಳು ಚೆನ್ನಾಗಿ ಓದುವ ಮೂಲಕ ಒಳ್ಳೆಯ ವ್ಯಕ್ತಿಗಳಾಗಿ ಎಂದು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಿಗೆ ಸಿಹಿ ತಿನಿಸಿದ ಡಿಸಿ: ಚಿಕ್ಕಮಂಡ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ ಅವರು ಮಕ್ಕಳಿಗೆ ಸಿಹಿ, ಹೂ, ಪುಸ್ತಕ ಹಾಗೂ ಸಮವಸ್ತ್ರ ನೀಡಿ ಮಕ್ಕಳನ್ನು ಬರಮಾಡಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಡಿಡಿಪಿಐ ಎಸ್.ಟಿ.ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಮುಖ್ಯಶಿಕ್ಷಕ ಆರ್.ದೇವರಾಜು, ಅಕ್ಷರ ದಾಸೋಹ ಅಧಿಕಾರಿ ಹರೀಶ್ ಹಾಜರಿದ್ದರು.

lokesh

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

3 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

7 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

7 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

7 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

7 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

7 hours ago