Mysore
22
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ.

ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇಗುಲ ರಸ್ತೆಯಲ್ಲಿರುವ ಪಟೇಲ್ ಸಾಮಿಲ್‌ನಲ್ಲಿ ಈ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್‌ಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಗೊರವನಹಳ್ಳಿ ಗ್ರಾಮದ ದರ್ಶನ್ ಹಾಗೂ ಸಚಿನ್‌ಗೆ ಗಂಭೀರ ಗಾಯಗಳಾಗಿದ್ದು, ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!