ಬೆಂಗಳೂರು 26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿ ಬಿ ಎಂ ಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ 26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನವರಾದ ಶ್ರೀಧರ್ ಗಂಗಾಧರ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಒತ್ತಾಯಿಸಿ ಇಸ್ಲಾಂಗೆ ಮತಾಂತರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹುಬ್ಬಳ್ಳಿಯ ನವನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಸೆ.9ರಂದು 12 ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಇತ್ತೀಚೆಗೆ ಬನಶಂಕರಿ ಠಾಣೆಗೆ ವರ್ಗಾಯಿಸಲಾಗಿತ್ತು.ಬನಶಂಕರಿ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಅನ್ಸಾರ್ ಪಾಷಾ ನಗರ ಶಾಸಕರೊಬ್ಬರ ಆಪ್ತರು ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಆಗಿದ್ದ ಅನ್ಸರ್ ಪಾಷಾ ಕೆಎಸ್ ಲೇಔಟ್ ನಿವಾಸಿಯಾಗಿದ್ದರು. ಈತನ ಸ್ನೇಹಿತ ಬನಶಂಕರಿ ನಿವಾಸಿ ನಯಾಜ್ ಪಾಷಾ ಹಾಗೂ ಕೆಎಸ್ ಲೇಔಟ್ ನಿವಾಸಿ ಹಾಜಿಸಾಬ್ ಅಲಿಯಾಸ್ ಶಮೀಮ್ ಶಾಲಿಕ್, ಮಂಡ್ಯದ ಅತ್ತಾವರ ರೆಹಮಾನ್ ಮತ್ತು ಕೆಎಸ್ ಲೇಔಟ್‌ನ ಶಬ್ಬೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.ಐವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…