ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಕಾಂಗ್ರೆಸ್ ಮುಖಂಡರಾದ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ, ಕೋಡಿಕೊಪ್ಪಲು ನಾಗೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ನೇತೃತ್ವದಲ್ಲಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಮಂಡ್ಯ ತಾಲ್ಲೂಕು ಬಸರಾಳು ಗ್ರಾಮದ ಹೇಮಾವತಿ ಬಡಾವಣೆಯ ಶಾನುಭೋಗನಹಳ್ಳಿ ಕುಮಾರ್ ಮತ್ತು ಬೆನ್ನಹಟ್ಟಿಯ ಮಹೇಶ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಾತಿಯ ಬಗ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಅವಾಚ್ಯ ಶಬ್ದಗಳು, ಕೀಳುಮಟ್ಟದ ಪದಗಳನ್ನು ಬಳಸಿ ಬೆದರಿಕೆ ಹಾಕಿದ್ದಾರೆ. ಸರ್ಕಾರ ನಿಮ್ಮದೇ ಇದೆ. ತಾಕತ್ತಿದ್ದರೆ ನಮ್ಮ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಜಾಲತಾಣದಲ್ಲಿ ಸವಾಲಾಕಿದ್ದಾರೆ. ಮಂಡ್ಯ ಜಿಲ್ಲೆಯು ಸಾಮರಸ್ಯಕ್ಕೆ ಹೆಸರಾಗಿದ್ದು, ಇಂತಹ ಕಿಡಿಗೇಡಿಗಳು, ಕೀಳುಮಟ್ಟದ ಮನಸ್ಥಿತಿವುಳ್ಳವರಿಂದ ಸಮಾಜದಲ್ಲಿ ಸಾಮರಸ್ಯ ಕೆಡುವಂತಹ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಕೋಡಿಕೊಪ್ಪಲು ನಾಗೇಶ್ ಮಾತನಾಡಿ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಆ.೧೩ರ ಬುಧವಾರ ಬಸರಾಳು ಬಂದ್‌ಗೆ ಕರೆ ನೀಡಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನುಕ್ರಮ ಜರುಗಿಸಿಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ, ಮುಡಾ ನಿರ್ದೇಶಕ ಎನ್.ದೊಡ್ಡಯ್ಯ, ಸಾತನೂರು ರಾಜು, ಶ್ರೀಧರ್, ಮಹೇಶ್, ಪ್ರದೀಪ್, ಚಂದ್ರು, ಶೈಲೇಂದ್ರ, ಮಹೇಶ್ ಇತರರು ಹಾಜರಿದ್ದರು.





