ಮಂಡ್ಯ

ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ ಪೈಕಿ ೩೪ ಜನ ಸಚಿವರಾಗಿದ್ದಾರೆ. ಸಚಿವ ಸ್ಥಾನದ ಉಳಿದ ಆಕಾಂಕ್ಷಿಗಳಿಗೆ ಪಕ್ಷ ಏನಾದರೂ ಪರ್ಯಾಯ ವ್ಯವಸ್ಥೆ ಮಾಡಬೇಕಾಗುತ್ತದೆ. ಆದರೆ, ೩೪ ಜನರಲ್ಲಿ ಎಷ್ಟು ಸಚಿವರನ್ನು ಕೈಬಿಡುತ್ತಾರೆ ಎನ್ನುವುದು ಪಕ್ಷಕ್ಕೆ ಬಿಟ್ಟ ವಿಚಾರ. ಯಾವುದೇ ಬದಲಾವಣೆ ಇದ್ದರೂ ಅದನ್ನು ಮುಖ್ಯಮಂತ್ರಿ ಮಾಡುತ್ತಾರೆ. ಅಂತೆಯೇ ಸಿಎಂ ಡಿನ್ನರ್ ಮೀಟಿಂಗ್‌ಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಮಳೆಯಿಂದ ಒಡೆದು ಹೋಗಿದ್ದ ಸಿಡಿಎಸ್ ನಾಲೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಅನಾರೋಗ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ದೇವೇಗೌಡರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇವತ್ತು ಡಿಸ್‌ಚಾರ್ಜ್ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಬೇರೆಯವರ ಮೂಲಕ ಅವರ ಆರೋಗ್ಯ ವಿಚಾರಿಸಿದ್ದೇನೆ. ನೇರವಾಗಿ ಮಾತನಾಡುವ ಪರಿಸ್ಥಿತಿ ಇಲ್ಲ. ಸಾಧ್ಯವಾದರೆ ಭೇಟಿ ಮಾಡುತ್ತೇನೆ. ಅವರ ಆರೋಗ್ಯ ಚೇತರಿಕೆ ಆಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

5 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

5 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

5 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

5 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

5 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

5 hours ago