ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ ಸ್ಥಾನ ಖಾಲಿ ಎಲ್ಲಿದೆ? ಖಾಳಿ ಇದ್ದರೆ ಚರ್ಚೆ ಸರಿ, ಆದರೆ ಖಾಲಿ ಇಲ್ಲದಿರುವಾಗ ಇದರ ಚರ್ಚೆ ಅಗತ್ಯವಿಲ್ಲ ಎಂದರು.
ಲಿಂಗಾಯತು, ಒಕ್ಕಲಿಗರು ಹಾಗೂ ದಲಿತರು ಸಿಎಂ ಸ್ಥಾನ ಕೇಳುತ್ತಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ಎಲ್ಲಾವನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸ್ವಾಮೀಜಿ ಅವರ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.




