ಮಂಡ್ಯ: ಜಿಲ್ಲೆಯ ಜೀವನಾಡಿ ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ (ಜು.29) ಬಾಗಿನ ಅರ್ಪಿಸಿದರು.
ಕೆ.ಆರ್.ಎಸ್ ಅಣೆಕಟ್ಟು ತುಂಬಿರುವ ಹಿನ್ನೆಲೆ ಸಂಪ್ರದಾಯದಂತೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಹಾಗೂ ಕೃಷಿ ಮಂತ್ರಿ ಎನ್.ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಧಯಕ್ ಹಾಗೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಕೆ.ಎಂ ಉದಯ್ ಸೇರಿದಂತೆ ಹಲವ ಗಣ್ಯರೊಂದಿಗೆ ಕಾವೇರಿಗೆ ಬಾಗಿನ ಅರ್ಪಿಸಿದರು.
ಮಧ್ಯಾಹ್ನ12.15 ಕ್ಕೆ ಸರಿಯಾಗಿ ಬಾಗಿನ ಅರ್ಪಿಸಲಾಯಿತು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.
ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು.