ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ ಆಯೋಜನೆ ಮಾಡಲಾಗಿದೆ.
ಇದನ್ನು ಓದಿ: ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.ಅಶೋಕ್
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಕೃಷಿ ಮೇಳಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.





