ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.
ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್.2024) ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ದೊಡ್ಡ ರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿ ಕುಮಾರ್, ಎಂ.ಬಿ.ರಮೇಶ್, ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ.ಗೊ.ರ.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.





