ಕೆಆರ್‌ಎಸ್: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಆದೇಶ ನೀಡಿದ್ದಾರೆ.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನನ್ನ ಕಾಲ್ಗುಣ ಚನ್ನಾಗಿಲ್ಲ ಎಂದಿದ್ದರು; ಕೃಷ್ಣರಾಜಸಾಗರದ ಒಟ್ಟು ೧೨೪.೮೦ ಅಡಿ ಸಾಮರ್ಥ್ಯದಲ್ಲಿ ೧೨೪ ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ ೪೯ ಟಿಎಂಸಿ ನೀರಿನ ಸಾಮರ್ಥ್ಯವಿದೆ. ೯೩ ವರ್ಷಗಳಲ್ಲಿ ೭೬ ಬಾರಿ ಭರ್ತಿಯಾಗಿದೆ. ೨೦೨೩-೨೪ ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ ‘ಸಿದ್ದರಾಮಯ್ಯ ಅವರ ಕಾಲ್ಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ‘ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.
ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ ೨೫ ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು. ಕೃಷಿ ಪ್ರಗತಿಗಾಗಿ ವರ್ಷಕ್ಕೆ ೧೯,೦೦೦ ಸಾವಿರ ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. ೯೩ ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆಅರ್‌ಎಸ್‌ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂಧರೆ ಮಾಡಿದ್ದೇವಾ? ಬಿತ್ತನೆ ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಗೆ ಸಿದ್ದರಾಮಯ್ಯ ಚಾಟಿ ಬೀಸಿದರು. ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ೩,೦೦೦ ಕೋಟಿ ರೂ. ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…