cm siddaramaiah mandya
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.
ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.
ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.
ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…