ಮಂಡ್ಯ

ಜುಲೈ 28 ರಂದು ಮದ್ದೂರಿಗೆ ಸಿಎಂ ಭೇಟಿ : ಕಾಮಗಾರಿಗಳ ಉದ್ಘಾಟನೆ

ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ‌ ಆದೇಶಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರನ್ನು ಪರಿಶೀಲನೆಗೆ ಒಳಪಡಿಸಿ ಎಂದರು.

ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳದಲ್ಲಿ ಹಾಗೂ ವೇದಿಕೆಯ ಬಳಿ‌ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಆಹಾರವನ್ನು‌ ಪರಿಶೀಲನೆಗೆ ಒಳಪಡಿಸಿ. ಸುತ್ತಮುತ್ತಲೂ ಸ್ವಚ್ಛತೆಯನ್ನು ಕಪಾಡಲು ಪೌರಕಾರ್ಮಿಕರನ್ನು ನಿಯೋಜಿಸಿ ನಿಗಾ ವಹಿಸಿ ಎಂದರು.

ಆಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ 60 ಕೌಂಟರ್ ಗಳನ್ನು ತೆರೆಯಿರಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸಿಬ್ಬಂದಿಗಳನ್ನು ನಿಯೋಜಿಸಿ ಆಹಾರ ವಿತರಣೆ ಮಾಡಿ ಎಂದರು.

ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟಿನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳಿಗೆ ತಲುಪಿಸಿ ಎಂದರು.

1168.37 ಕೋಟಿ ರೂ ವೆಚ್ಚದ 88 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ: ಲೋಕೋಯೋಗಿ ಇಲಾಖೆಯ- 81.29 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12.15 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-8 ಕೋಟಿ ರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ- 257.18 ಕೋಟಿ ರೂ, ಆರೋಗ್ಯ‌ ಮತ್ತು ಕುಟುಂಬ ಕಲ್ಯಾಣ ಇಲಾಖೆ- 2.45 ಕೋಟಿ ರೂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ-16.49 ಕೋಟಿ ರೂ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ರೂ 47.28 ಕೋಟಿ. ಕಾವೇರಿ ನೀರಾವರಿ ನಿಗಮ ರೂ 484.33 ಕೋಟಿ. ಮದ್ದೂರು ಪುರಸಭೆ ರೂ 5.25 ಕೋಟಿ. ಸಮಾಜ ಕಲ್ಯಾಣ ಇಲಾಖೆ ರೂ 23 ಕೋಟಿ. ಮಂಡ್ಯ ವಿಶ್ವವಿದ್ಯಾನಿಲಯ 8.50 ಕೋಟಿ ರೂ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 187 ಕೋಟಿ ರೂ, ಕೃಷಿ ಇಲಾಖೆ 2 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 1.80 ಕೋಟಿ ರೂ, ತೋಟಗಾರಿಕೆ ಇಲಾಖೆ 21.65 ಕೋಟಿ ರೂ ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago