ಮಂಡ್ಯ: ನಾಳೆಯಿಂದ ಡಿಸೆಂಬರ್.7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸ್ಥಳೀಯ ಶಾಸಕರು ಹಾಜರಿರಲಿದ್ದಾರೆ.
ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಂಡ್ಯಗೆ ಭೇಟಿ ನೀಡಲಿದ್ದಾರೆ.





