Categories: ಮಂಡ್ಯ

ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಬೇಕು: ಚಲುವರಾಯಸ್ವಾಮಿ ಅಭಿಮತ

ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಹೇಳಿದರು.

ಅವರು ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 75ನೇ ವರ್ಷದ ವಜ್ರಮಹೋತ್ಸವ ಹಾಗೂ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಸೇರಿದಂತೆ ಭಾರತ ದೇಶಾದ್ಯಂತ ಸಹಕಾರ ಚಳುವಳಿಯು ವಿಸ್ತರಿಸಿದೆ. ರೈತರ ಬಂಧುವಿನಂತೆ, ರೈತರ ಮಿತ್ರನಂತೆ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿ ಬೇಕಾದ ಬಿತ್ತನೆ ಬೀಜಗಳು, ರಾಸಾಯನಿಕ ಗೊಬ್ಬರಗಳು ಹಾಗೂ ಔಷಧಿಗಳನ್ನು ರಿಯಾಯಿತಿ ದರದಲ್ಲಿ ಸಕಾಲಕ್ಕೆ ನೀಡಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕರಿಸಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರೈತನು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ 5 ರೂ ಸಹಾಯ ಧನವನ್ನು ನೀಡುವ ಜೊತೆಗೆ 5ಲಕ್ಷ ರೂಪಾಯಿಗಳವರೆಗೆ ರೈತರು ಬೇಸಾಯ ನಡೆಸಲು ಶೂನ್ಯ ಬಡ್ಡಿಯಲ್ಲಿ ಬಡ್ಡಿ ರಹಿತವಾದ ಸಾಲ ಸೌಲಭ್ಯವನ್ನು ನೀಡಿ ರೈತರಿಗೆ ಆಸರೆಯಾಗುವ ಜೊತೆ ಜೊತೆಗೆ ಕೃಷಿ ಚಟುವಟಿಕೆ ನಡೆಸಲು ಬೇಕಾದ ಮಾರ್ಗದರ್ಶನ ಹಾಗೂ ಉತ್ತೇಜನ ನೀಡಿ ರೈತರು ನೆಮ್ಮದಿಯಾಗಿ ಬೇಸಾಯ ನಡೆಸಿ ಆರ್ಥಿಕವಾಗಿ ಸ್ವಾವಲಂಭನೆ ಸಾಧಿಸಿ ಸಾಲದ ಬಾಧೆಯಿಂದ ಹೊರಬರಲು ಸದೃಡವಾಗಿ ನಿಂತು ಸಹಕಾರ ಹಸ್ತವನ್ನು ಚಾಚಿದೆ. ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಡ್ಯ ಜಿಲ್ಲೆಯ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 1038 ಕೋಟಿ ರೂಪಾಯಿ ಸಾಲ ಸೌಲಭ್ಯವನ್ನು ನೀಡಿದೆ ಎಂದು ಅಭಿಮಾನದಿಂದ ಹೇಳಿದರು.

ರಾಜ್ಯದಲ್ಲಿ ಈ ಭಾರಿ ಉತ್ತಮವಾದ ಮಳೆಯಾಗಿದ್ದು ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆಗಳನ್ನು ನಡೆಸಿದ್ದಾರೆ. ಉತ್ತಮವಾದ ಮಳೆಯಾಗಿ ಕೆರೆ-ಕಟ್ಟೆಗಳು ಹಾಗೂ ಜಲಾಶಯಗಳು ತುಂಬಿ ತುಳುಕುತ್ತಿದ್ದು ಸಮೃದ್ಧವಾದ ಫಸಲು ಬೆಳೆದು ಉತ್ತಮವಾಗಿ ಇಳುವರಿ ಪಡೆದಿರುವ ರೈತರು ಬೇಸಾಯ ಚಟುವಟಿಕೆಯನ್ನು ನಡೆಸಲು ಅಗತ್ಯವಾಗಿ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸ ಗೊಬ್ಬರವನ್ನು ಸರಬರಾಜು ಮಾಡಿಸಿ ರಾಜ್ಯದ ಕೃಷಿ ಸಚಿವನಾಗಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಿರುವ ಆತ್ಮವಿಶ್ವಾಸ ನನಗೆ ಇದೆ. ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ಶಾಸಕ ಮಂಜು ವಹಿಸಿದ್ದರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಕಾಡೇನಹಳ್ಳಿ ರಾಮಚಂದ್ರ, ಅಕ್ಕಿಹೆಬ್ಬಾಳು ಕೃಷಿ ಪತ್ತಿನ ಸಹಕರ ಸಂಘದ ಅಧ್ಯಕ್ಷ ಎಸ್.ಆರ್.ನವೀನ್‌ಕುಮಾರ್, ಮೈಸೂರು ಮಹರಾಣಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸುರೇಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮೈಷುಗರ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಅಕ್ಕಿಹೆಬ್ಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿಸದಸ್ಯರಾದ ಕೊಡಗಹಳ್ಳಿ ಮಂಜೇಗೌಡ, ಬಿ.ನಾಗೇಂದ್ರಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಡಿಸಿಸಿ ಬ್ಯಾಂಕ್ ಪ್ರಧಾನವ್ಯವಸ್ಥಾಪಕಿ ಆರ್.ಜೆ.ರೂಪಶ್ರೀ, ಶಶಿಧರ್ ಸಂಗಾಪುರ, ರಾಜನಾಯಕ, ಎ.ಎಂ.ಸಂಜೀವಪ್ಪ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಪ್ರಮೋಧ, ಮೇಲ್ವಿಚಾರಕ ಆದಿಲ್‌ಪಾಶ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago