ಮಳವಳ್ಳಿ : 2 ದಿನಗಳ ಕಾಲ ನಡೆದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ ಬಿದಿದ್ದು, ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
ಭಾನುವಾರ ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿರೀಕ್ಷೆಗೂ ಮೀರಿ ಬಂದಿದ್ದ ಸಾವಿರಾರು ಪ್ರವಾಸಿಗರು ಪರಿಸರ ಹಾಗೂ ಸಾಂಸ್ಕೃತಿಕ ರಸದೌತಣವನ್ನು ಸವಿದರು.
ಹಾಲಿನ ನೊರೆಯಂತೆ ದುಮ್ಮಿಕ್ಕಿ ಹರಿಯುವ ಜಲಸಿರಿ ಹಾಗೂ ವಿವಿಧ ಬಣ್ಣದ ಚಿತ್ತಾರದ ನಡುವೆ ಹಮ್ಮಿಕೊಳ್ಳಲಾಗಿದ್ದ ಲೇಸರ್ ಶೋ ಪ್ರವಾಸಿಗರ ಮನಸೂರೆಗೊಂಡಿತು. ಭಾನುವಾರ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ ಗಂಟೆವರೆಗೆ ಜಿಲ್ಲೆಯ ವಿವಿಧ ಕಲಾವಿದರ ಪ್ರದರ್ಶನ ಗಮನ ಸೆಳೆಯಿತು. ಖ್ಯಾತ ಜಾನಪದ ಗಾಯಕ ಮಳವಳ್ಳಿ ಮಹದೇವಸ್ವಾಮಿ ಅವರ ಗಾಯನ ಜನರ ಮನ ಸೆಳೆಯಿತು.
ನಂತರ ಜಾನಪದ ಕಲಾವಿದರಾದ ಸವಿತಕ್ಕ, ಹರ್ಷ, ಕಂಬದ ರಂಗಯ್ಯ ಹಾಗೂ ಮಲ್ಲಿಕಾರ್ಜುನ ಕೆಂಕೆರೆ ಕಾರ್ಯಕ್ರಮ ನಡೆಸಿದರು. ತಾಲ್ಲೂಕಿನ ಹಲಗೂರು, ಕಿರುಗಾವಲು, ಬಿ.ಜಿ.ಪುರ, ಮಳವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಗೆ ನೂರಾರು ಬಸ್‌ಗಳ ಮೂಲಕ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಡಿವೈಎಸ್‌ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ನೂರಾರು ಪೊಲೀಸರು ಭದ್ರತೆ ಕಲ್ಪಿಸಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…