ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು.
ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ ಕೆಂಪನಂಜಮ್ಮಣ್ಣಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಜನಕಲ್ಯಾಣಕ್ಕಾಗಿ ತನ್ನ ಬದುಕನ್ನೇ ಮುಡುಪಿಟ್ಟ ಈ ರಾಜಮಾತೆಯ ಮಹಾನ್ ತ್ಯಾಗವನ್ನು ಜನತೆ ಪ್ರತಿದಿನವೂ ಸ್ಮರಿಸುವಂತಾಗಬೇಕು. ಇವರ ಪ್ರತಿಮೆಯನ್ನು ಮೈಸುರು, ಮಂಡ್ಯ ನಗರದ ಹೃದಯ ಭಾಗದಲ್ಲಿ ಹಾಗೂ ಕನ್ನಂಬಾಡಿ ಅಣೆಕಟ್ಟೆಯ ಮುಂಭಾಗದಲ್ಲಿ ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮತ್ತು ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ರೈತ ಕಲ್ಯಾಣ ಸಂಘದ ರಾಜ್ಯ ಉಪಾಧ್ಯಕ್ಷ ಹರೀಶ್, ಹೊಟೇಲ್ ಮಾಲಿಕರಾದ ಕೆ.ಎಲ್.ಸುರೇಶ್, ಮುಖಂಡರಾದ ಕಂಚಿನಕೆರೆ ದೇವರಾಜು, ರಾಜೇಗೌಡ, ಕುಮಾರಿ ಎಂ.ಮಾನ್ಯ ಹಾಗೂ ಹೊಟೇಲ್ ಸಿಬ್ಬಂದಿ ಉಪಸ್ಥಿತರಿದ್ದರು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…